10:43 AM Wednesday19 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು: ಡಿಸೆಂಬರ್ 3 ಮತ್ತು 4ರಂದು ನಡೆಯಲಿರುವ ‘ಬಹುಸಂಸ್ಕೃತಿ ಉತ್ಸವ’ ದ ಲಾಂಛನ ಬಿಡುಗಡೆ

16/11/2024, 18:14

ಮಂಗಳೂರು(reporterkarnataka.com): ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4 ರಂದು ನಡೆಯಲಿರುವ ‘ಬಹುಸಂಸ್ಕೃತಿ ಉತ್ಸವ’ದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಬಿಡುಗಡೆಗೊಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಶಾಸಕ ಯು. ರಾಜೇಶ್ ನಾಯ್ಕ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್., ಕೊಂಕಣಿ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್., ಮಂಗಳೂರು ಮ.ನ.ಪಾ ಕಮಿಶನರ್ ಕೆ.ಎಲ್. ಆನಂದ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಉಪಸ್ಥಿತರಿದ್ದರು.
ಬಹುಸಂಸ್ಕೃತಿ ಉತ್ಸವ’ವು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿಗಳ ಜಂಟಿ ಆಶ್ರಯದಲ್ಲಿ ಹಾಗೂ ದ.ಕ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು