1:36 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

Mangaluru | ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಮತ್ತೆ ಲೋಕಾಯುಕ್ತ ಬಲೆಗೆ: 1 ವರ್ಷದೊಳಗೆ 2ನೇ ಬಾರಿ ಸೆರೆ!

28/05/2025, 21:35

ಮಂಗಳೂರು(reporter Karnataka.com): ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಅವರು
ಒಂದು ವರ್ಷದೊಳಗೆ ಎರಡನೇ ಬಾರಿಗೆ ಲೋಕಾಯುಕ್ತ ಬಲೆಗೆ
ಬಿದ್ದಿದ್ದಾರೆ.
ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279-5ರಲ್ಲಿ 1.39 ಎಕರೆ ಜಮೀನಿನ ಪೈಕಿ 35 ಸೆಂಟ್ಸ್ ಜಾಗದಲ್ಲಿ ಮನೆ ಕಟ್ಟುವುದಕ್ಕಾಗಿ ಅಲ್ಲಿದ್ದ ಕಲ್ಲುಗಳನ್ನು ತೆರವು ಮಾಡಲು ಗಣಿ ಇಲಾಖೆಯ ಅನುಮತಿ ಕೋರಿದ್ದರು. ಈ ಬಗ್ಗೆ 2024ರ ಅ.28ರಂದು ಗಣಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದು ಅನುಮತಿ ಪತ್ರ ನೀಡಿರಲಿಲ್ಲ. ವಿಚಾರಿಸಲು ಗಣಿ ಇಲಾಖೆಗೆ ಹೋದಾಗ ಉಪ ನಿರ್ದೇಶಕಿ ಕೃಷ್ಣವೇಣಿ ತನ್ನ ಕೊಠಡಿಗೆ ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಸಿ, ಈ ಫೈಲಿಗೆ 50 ಸಾವಿರ ತೆಗೆದುಕೊಳ್ಳಿ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ನೊಂದ ಅರ್ಜಿದಾರ ಈ ಕುರಿತು ಮಂಗಳೂರು ಲೋಕಾಯುಕ್ತ ಇಲಾಖೆಗೆ ದೂರು ಸಲ್ಲಿಸಿದ್ದರು. ಮೇ 28ರಂದು ಅರ್ಜಿದಾರ ಲಂಚದ ಹಣ 50 ಸಾವಿರವನ್ನು ಮಲ್ಲಿಕಟ್ಟೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿಯಲ್ಲಿ ವಾಹನ ಚಾಲಕ ಮಧು ಎಂಬಾತನ ಮೂಲಕ ಕೃಷ್ಣವೇಣಿ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ಇಬ್ಬರನ್ನೂ ಬಂಧಿಸಿದ್ದಾರೆ. ಒಂದು ವರ್ಷದ ಹಿಂದೆ ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಲೋಕಾಯುಕ್ತ ದಾಳಿ ಮಾಡಿ, ಬೆಂಗಳೂರು ಸೇರಿ ವಿವಿಧ ಕಡೆ 11 ಕೋಟಿಯಷ್ಟು ಆಸ್ತಿ ಪತ್ತೆ ಮಾಡಿದ್ದರು. ಅಕ್ರಮ ಆಸ್ತಿ ಪ್ರಕರಣದಲ್ಲಿ ಒಮ್ಮೆಗೆ ಬಂಧನ ಆದರೂ, ಈಕೆಯನ್ನು ಅದೇ ಜಾಗದಲ್ಲಿ ಮುಂದುವರಿಸಲಾಗಿತ್ತು. ಆ ಬಳಿಕ ಕಳೆದ ಜುಲೈ ತಿಂಗಳಲ್ಲಿ ಮಂಗಳೂರಿಗೆ ಬಂದಿದ್ದ ಉಪ ಲೋಕಾಯುಕ್ತ ವೀರಪ್ಪ ಅವರೂ ಕೃಷ್ಣವೇಣಿ ಬೇಜವಾಬ್ದಾರಿ ನಡೆಯ ಬಗ್ಗೆ ತರಾಟೆ ಎತ್ತಿಕೊಂಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರೂ ಇದೇ ಮಹಿಳಾ ಅಧಿಕಾರಿಯ ನಿರ್ಲಕ್ಷ್ಯ ಧೋರಣೆ ಬಗ್ಗೆ ಪ್ರಶ್ನಿಸಿದ್ದಲ್ಲದೆ, ಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚಿಸಿದ್ದರು.
ಆದರೆ ಭ್ರಷ್ಟಾಚಾರದಲ್ಲಿ ಸಿಕ್ಕಿಬಿದ್ದರೂ ಅದೇ ಅಧಿಕಾರಿಯನ್ನು ಮಂಗಳೂರಿನಲ್ಲಿ ವರ್ಷ ಕಳೆದರೂ ಉಳಿಸಿಕೊಳ್ಳಲಾಗಿತ್ತು.
ಲೋಕಾಯುಕ್ತ ಪ್ರಭಾರ ఎస్పి ಕುಮಾರಚಂದ್ರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗಾನ ಪಿ. ಕುಮಾರ್, ಪೊಲೀಸ್‌ ನಿರೀಕ್ಷಕರಾದ ಸುರೇಶ್ ಕುಮಾರ್, ಭಾರತಿ ಜಿ., ಚಂದ್ರಶೇಖರ್ ಕೆ.ಎನ್, ಉಡುಪಿ ಜಿಲ್ಲಾ ಲೋಕಾಯುಕ್ತ ನಿರೀಕ್ಷಕರಾದ ಮಂಜುನಾಥ, ರಾಜೇಂದ್ರ ನಾಯಕ್ ಮತ್ತು ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು