ಇತ್ತೀಚಿನ ಸುದ್ದಿ
ಮಂಗಳೂರು: ಡಿವೈಡರ್ ಹಾರಿ ಪ್ರಪಾತಕ್ಕೆ ಉರುಳುತ್ತಿದ್ದ ಕಾರು ಸ್ವಲ್ಪದಲ್ಲೇ ಪಾರು: ಅದೃಷ್ಟವಶಾತ್ ಮೂವರು ಬಚಾವ್
15/07/2023, 10:45

ಮಂಗಳೂರು(reporterkarnataka.com): ನಗರದ ಕದ್ರಿ ಬಳಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಹಾರಿದ್ದು, ಅದೃಷ್ಟವಶಾತ್
ಸ್ವಲ್ಪದರಲ್ಲೇ ಪಕ್ಕದಲ್ಲಿದ್ದ ಪ್ರಪಾತಕ್ಕೆ ಉರುಳುವುದು ತಪ್ಪುವ ಮೂಲಕ ಕಾರಲ್ಲಿದ್ದ ಮೂವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಕದ್ರಿ ಸರ್ಕಿಟ್ ಹೌಸ್ ಬಿಜೈ ರಸ್ತೆ ಮಧ್ಯೆ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಲ್ಪಸ್ವಲ್ಪಗಾಯಗಳೊಂದಿಗೆ ಪವಾಡ ಸದೃಶ್ಯರಾಗಿ ಪಾರಾಗಿದ್ದಾರೆ.
ಶುಕ್ರವಾರ ತಡರಾತ್ರಿ ಸುಮಾರು 12.30ರ ವೇಳೆಗೆ ಅಪಘಾತ ನಡೆದಿದೆ. ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಮಾರುತಿ ಬಲೇನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ವಿದ್ಯುತ್ ಕಂಬಕ್ಕೆ ಹೊಡೆದು ಪಕ್ಕದ ರಸ್ತೆ ಬಿದ್ದು ಅಲ್ಲಿದ್ದ ಪ್ರಪಾತದ ಸನಿಹದಲ್ಲೇ ಗಿಡ ಗಂಟಿಗಳ ಮಧ್ಯೆ ಸಿಲುಕಿಕೊಂಡಿದೆ. ಅಪಘಾತದ ತೀವ್ರತೆಗೆ ದಾರಿ ದೀಪದ ಲೈಟ್ ಕಂಬ ದೂರಕ್ಕೆ ಎಸೆಯಲ್ಪಟ್ಟಿದೆ.
ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.