1:09 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಂಗಳೂರು: ಜನಸ್ನೇಹಿ ವೈದ್ಯ ಪದವಿನಂಗಡಿಯ ಡಾ. ಭರತ್ ಕುಮಾರ್ ಇನ್ನಿಲ್ಲ

06/07/2026, 22:09

ಮಂಗಳೂರು(reporterkarnataka.com): ನಗರದ ಜನಪ್ರಿಯ ವೈದ್ಯ ಡಾ. ಭರತ್ ಕುಮಾರ್ ಅವರು ಇಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.
ಪದವಿನಂಗಡಿಯಲ್ಲಿ ಕ್ಲಿನಿಕ್ ಹೊಂದಿದ್ದ ಅವರು 3 ದಶಕಗಳಿಗೂ ಹೆಚ್ಚು ಕಾಲ ಜನಸ್ನೇಹಿ ವೈದ್ಯರಾಗಿ ಸುತ್ತಮುತ್ತಲಿನ ಬಡ ಕುಟುಂಬದವರಿಗೆ ವೈದ್ಯಕೀಯ ಸೇವೆ ನೀಡಿದ್ದರು.
ದಶಕಗಳ ಕಾಲ ಪದವಿನಂಗಡಿ, ಕೊಂಚಾಡಿ, ಪಚ್ಚನಾಡಿ, ಬೊಂದೇಲ್, ಕಾವೂರು, ದೇರೆಬೈಲ್ ಸೇರಿದಂತೆ ಮಂಗಳೂರಿನ ಬಹುತೇಕ ಕಡೆಗಳ ಜನರಿಗೆ ವೈದ್ಯರಾಗಿ ಸೇವೆ ಜನಸ್ನೇಹಿ ವೈದ್ಯ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು.
ಕಡಿಮೆ ಫೀಸಿನಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ನೀಡುವುದು ಮಾತ್ರವಲ್ಲದೆ ರೋಗಿಗಳ ಜತೆ ಆಪ್ತತೆ ಇಟ್ಟುಕೊಂಡಿದ್ದರು. ನಗುವೇ ಮರೆತು ಬಿಟ್ಟಿರುವ ಬಹುತೇಕ ಡಾಕ್ಟರ್ ಗಳ ನಡುವೆ ಡಾ. ಭರತ್ ಕುಮಾರ್ ಅವರು ರೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಕಷ್ಟ ಸುಖವನ್ನು ವಿಚಾರಿಸುತ್ತಿದ್ದರು.
ವೈದ್ಯರೆಂದರೆ ಯಮನ ತಮ್ಮ ಎಂದು ಜನರು ಹೆದರಿಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಡಾ. ಭರತ್ ಕುಮಾರ್ ಅವರು ಮೇರು ವ್ಯಕ್ತಿತ್ವದ ತೀರಾ ಅಪರೂಪದ ವೈದ್ಯರು. ರಿಪೋರ್ಟರ್ ಕರ್ನಾಟಕ ಬಳಗದಿಂದ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ.

ಇತ್ತೀಚಿನ ಸುದ್ದಿ

ಜಾಹೀರಾತು