11:42 AM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಮಂಗಳೂರು ಇಎಸ್ ಐ ಆಸ್ರತ್ರೆ ಮೇಲ್ದರ್ಜೆಗೇರಿಸಲು ಶಾಸಕ ವೇದವ್ಯಾಸ್ ಕಾಮತ್ ಕೇಂದ್ರ ಸಚಿವ ರಾಮೇಶ್ವರ ತೇಲಿಗೆ ಮನವಿ

09/10/2022, 23:49

ಮಂಗಳೂರು(reporterkarnataka.com):
ನಗರದ ಇ.ಎಸ್.ಐ ಆಸ್ರತ್ರೆಯನ್ನು ಮೇಲ್ದರ್ಜೆಗೇರಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಕೇಂದ್ರ ಉದ್ಯೋಗ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವ ರಾಮೇಶ್ವರ ತೇಲಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕೇಂದ್ರ ಸಚಿವರ ಮಂಗಳೂರು ಭೇಟಿಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸಚಿವರನ್ನು ಭೇಟಿ ಮಾಡಿ ಈ ಕುರಿತು ಮನವಿ‌ ಸಲ್ಲಿಸಿದ್ದು, ಇ.ಎಸ್.ಐ ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುವ ದೃಷ್ಟಿಯಿಂದ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು.
ಈ ಕುರಿತು ಮಾತನಾಡಿದ ಅವರು, ನಗರದಲ್ಲಿರುವ ಇ.ಎಸ್.ಐ ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆ, ವೈದ್ಯಕೀಯ ಉಪಕರಣಗಳ ಕೊರತೆಯಿರುವ ಕಾರಣದಿಂದ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತಿದ್ದು, ಆ ವೆಚ್ಚವನ್ನು ಇ.ಎಸ್.ಐ ಆಸ್ಪತ್ರೆಯ ಮೂಲಕ ಭರಿಸಲಾಗುತ್ತಿದೆ. ಆಸ್ಪತ್ರೆಯ ಸಂಪೂರ್ಣ ಅಭಿವೃದ್ಧಿಯಿಂದ ನಾಗರಿಕರಿಗೂ ಉತ್ತಮ ಸೌಲಭ್ಯ ನೀಡಬಹುದಾಗಿದ್ದು, ಆ ನಿಟ್ಟಿನಲ್ಲಿ ಸಚಿವರ ಗಮನಕ್ಕೆ ತರಲಾಗಿದೆ ಎಂದು ಶಾಸಕ ‌ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಎಂ.ಆರ್.ಪಿ.ಎಲ್ ವ್ಯವಸ್ಥಾಪಕ ನಿರ್ದೇಶರಾದ ಎಂ ವೆಂಕಟೇಶ್, ಪಿಎಫ್ ಕಚೇರಿ ಆಯುಕ್ತರಾದ ಉಣ್ಣಿಕೃಷ್ಣನ್, ಇ.ಎಸ್.ಐ ಆಸ್ಪತ್ರೆಯ ಪ್ರಮುಖರು, ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು