ಇತ್ತೀಚಿನ ಸುದ್ದಿ
ಮಂಗಳೂರು: ಈಶ್ವರಪ್ಪ ಬಂಧನ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
16/04/2022, 17:20
ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಎಸ್. ಈಶ್ವರಪ್ಪ ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.
ಈಶ್ವರಪ್ಪ ಅವರು ರಾಜೀನಾಮೆ ನೀಡಿದರೆ ಸಾಲದು, ತಕ್ಷಣ ಅವರನ್ನು ಬಂಧಿಸಬೇಕು. ಅವರ ವಿರುದ್ಧ ಭ್ರಷ್ಟಾಚಾರ ಕಾಯಿದೆಯಡಿ ಪ್ರಕರಣ ದಾಖಲಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಜಿ.ಪರಮೇಶ್ವರ್ ಬಿ.ರಮಾನಾಥ ರೈ,ಯು.ಟಿ. ಖಾದರ್, ಐವನ್ ಡಿ.ಸೋಜ,ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ ಮುಂತಾದವರು ಉಪಸ್ಥಿತರಿದ್ದರು.