ಇತ್ತೀಚಿನ ಸುದ್ದಿ
ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ ಸ್ವಾಗತಿಸಿದ ರಾಜ್ಯಾಧ್ಯಕ್ಷರು
20/04/2024, 18:06
ಬಂಟ್ವಾಳ(reporterkarnataka.com): ಮಾಜಿ ಮೇಯರ್, ಕಾಂಗ್ರೆಸ್ಸಿನ ಮುಖಂಡೆ ಕವಿತಾ ಸನಿಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಂಟ್ವಾಳದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ವಿಜಯೇಂದ್ರ ಅವರು ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಸ್ವಾಗತಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,
ಶಾಸಕರಾದ ರಾಜೇಶ್ ನಾಯ್ಕ್, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.
ಮಂಗಳೂರು ಮಹಾನಗರಪಾಲಿಕೆಗೆ ಎರಡು ಬಾರಿ ಕಾರ್ಪೋರೇಟರ್ ಆಗಿ ಆಯ್ಕೆಗೊಂಡಿದ್ದ ಕವಿತಾ ಸನಿಲ್ ಅವರಿಗೆ ಕಾಂಗ್ರೆಸ್ ಪಕ್ಷವು ಮೇಯರ್ ಸ್ಥಾನ ನೀಡಿತ್ತು.