9:00 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಮಂಗಳೂರು: ಗಣರಾಜ್ಯೋತ್ಸವ ಧ್ವಜಾರೋಹಣ ನಡೆಸಿದ ನಿವೃತ್ತ ಸರಕಾರಿ ಅಧಿಕಾರಿ ಕುಸಿದು ಬಿದ್ದು ಸಾವು

26/01/2024, 19:30

ಮಂಗಳೂರು(reporterkarnataka.com): ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನಡೆಸಿದ ವ್ಯಕ್ತಿಯೊಬ್ಬರು ಮನೆಗೆ ತೆರಳಿದಾಗ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ನಗರದ ಬಿಜೈ ನ್ಯೂ ರೋಡ್ ನಲ್ಲಿರುವ ಫೆಲಿಸಿಟಿ ಅಪಾಟ್೯ಮೆಂಟ್ ಅಸೋಸಿಯೇಶನ್ ವತಿಯಿಂದ ಇಂದುಗಣರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಬೆಳಿಗ್ಗೆ 7 ಗಂಟೆಗೆ ಧ್ವಜಾರೋಹಣವನ್ನು ಅಪಾಟ್೯ಮೆಂಟ್ ನ ಹಿರಿಯ ನಾಗರೀಕರಾದ, ನಿವೃತ್ತ ಸರಕಾರಿ ಅಧಿಕಾರಿ ಅಬ್ದುಲ್ ಸಮದ್ (80) ಅವರು ಧ್ವಜಾರೋಹಣ ನಡೆಸಿದ್ದರು. ನಂತರ ಭಾಷಣವನ್ನೂ ಮಾಡಿದ್ದ ಅವರು ಕಾರ್ಯಕ್ರಮ ಮುಗಿದ ಬಳಿಕ ಎಲ್ಲರಿಗೂ ಹಸ್ತಲಾಘವ ಮಾಡಿ, ಮನೆಗೆ ಲಿಫ್ಟ್ ನಲ್ಲಿ ತೆರಳಿದ್ದರು.
ಮನೆಯ ಒಳಗೆ ಬಂದು ಆಸೀನರಾಗಿದ್ದಾಗ ಇದ್ದಕ್ಕಿಂದಂತೆ ಕುಸಿದು ಬಿದ್ದರು. ತಕ್ಷಣವೇ ಅಕ್ಕಪಕ್ಕದ ನಿವಾಸಿಗಳು ಬಂದು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸುತ್ತಿದ್ದಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಯಿತು.
ಮೂಲತ: ಕುಂದಾಪುರ ಗಂಗೊಳ್ಳಿ ನಿವಾಸಿಯಾಗಿರುವ ಅವರ ಮೃತದೇಹವನ್ನು ನಂತರ ಊರಿಗೆ ಕೊಂಡೊಯ್ಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು