11:02 PM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಮಂಗಳೂರು | ಮೇರಿಹಿಲ್ ಬಳಿ ಮನೆಯಿಂದ 6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: 24 ತಾಸಿನೊಳಗೆ ಆರೋಪಿ ಅಂದರ್

21/07/2026, 22:57

ಮಂಗಳೂರು(reporterkarnataka.com):ನಗರದ ಮೇರಿಹಿಲ್ ಬಾಂದೋಟ್ಟು ಬಳಿ ಕಾರ್ಮಿಕನೊಬ್ಬ ಮನೆಯೊಂದರಿಂದ 6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣವನ್ನು 24 ತಾಸಿನೊಳಗೆ ಪೊಲೀಸರು ಬೇಧಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಹಾಗೂ ಪ್ರಸ್ತುತ ಮಂಗಳೂರಿನ ಬಂದರು ಪ್ರದೇಶದಲ್ಲಿ ವಾಸವಾಗಿರುವ ಜಹೀರುದ್ದೀನ್ (24) ಬಂಧಿತ ಆರೋಪಿಯಾಗಿದ್ದಾನೆ.
ಮೇರಿಹಿಲ್ ಬಾಂದೋಟ್ಟು ಪ್ರದೇಶದ ಮನೆಯೊಂದರಲ್ಲಿ ಛಾವಣಿ ಬದಲಾವಣೆ ಹಾಗೂ ಫಾಲ್ಸ್ ಸೀಲಿಂಗ್ ಕಾಮಗಾರಿ ನಡೆಯುತ್ತಿದ್ದ ವೇಳೆ, ಮನೆಯ ಟೇಬಲ್ ಡ್ರಾವರ್‌ನಲ್ಲಿದ್ದ ಸಣ್ಣ ಪರ್ಸ್‌ನೊಳಗಿನ 20 ಗ್ರಾಂ ಚಿನ್ನದ ಕಡಗ, 17 ಗ್ರಾಂ ಚಿನ್ನದ ಚೈನ್, 8 ಗ್ರಾಂ ಮತ್ತು 4 ಗ್ರಾಂ ತೂಕದ ಎರಡು ಉಂಗುರಗಳು ಹಾಗೂ ಸೊನಾಟಾ ಕಂಪನಿಯ ಗೋಲ್ಡ್ ಕೋಟೆಡ್ ವಾಚ್ ಸೇರಿದಂತೆ ಒಟ್ಟು ಸುಮಾರು 49 ಗ್ರಾಂ ಚಿನ್ನಾಭರಣ ಕಳುವಾಗಿತ್ತು. ಕಳವಾದ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹6.37 ಲಕ್ಷ ಎಂದು ಅಂದಾಜಿಸಲಾಗಿದೆ.
ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 305ರಡಿ ಪ್ರಕರಣ ದಾಖಲಾಗಿತ್ತು.
ತನಿಖೆ ವೇಳೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರನ್ನು ವಿಚಾರಣೆಗೊಳಪಡಿಸಿದಾಗ, ಉತ್ತರ ಪ್ರದೇಶ ಮೂಲದ ಹಾಗೂ ಪ್ರಸ್ತುತ ಮಂಗಳೂರಿನ ಬಂದರು ಪ್ರದೇಶದಲ್ಲಿ ವಾಸವಾಗಿರುವ ಜಹೀರುದ್ದೀನ್ (24) ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯಿಂದ ಕಳವಾಗಿದ್ದ ಎಲ್ಲಾ ಚಿನ್ನಾಭರಣ ಹಾಗೂ ವಾಚ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಡಿ.ಆರ್. ಮಂಜಪ್ಪ, ಸಬ್ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ಡಿ. ಹಾಗೂ ಸಿಬ್ಬಂದಿಯ ತಂಡ ಪ್ರಮುಖ ಪಾತ್ರವಹಿಸಿದ್ದು, ಕ್ಷಿಪ್ರ ತನಿಖೆ ನಡೆಸಿ 24 ಗಂಟೆಯೊಳಗೆ ಪ್ರಕರಣವನ್ನು ಭೇದಿಸಿರುವುದಕ್ಕೆ ಪೊಲೀಸ್ ಆಯುಕ್ತರು ಅಭಿನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು