4:47 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಮಂಗಳೂರು: ಭೀಕರ ರಸ್ತೆ ಅಪಘಾತ: ಎನ್ ಎಸ್ ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಸಹಿತ ಇಬ್ಬರು ಬಲಿ; ಇನ್ನಿಬ್ಬರು ಗಂಭೀರ

18/06/2025, 13:15

ಮಂಗಳೂರು(reporterkarnataka.com): ನಗರದ ಹೊರವಲಯದ ಜಪ್ಪಿನಮೊಗರು ಬಳಿ ಇಂದು ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎನ್ ಎಸ್ ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ನಂತರ ಕಿರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ಘೋರ ದುರಂತ ಸಂಭವಿಸಿದೆ. ಓಂಶ್ರೀ(24) ಅವರ ಸ್ನೇಹಿತ ಅಮನ್ ರಾವ್(22) ಮೃತಪಟ್ಟ ಇನ್ನೊರ್ವ ದುರ್ದೈವಿ. ಕಾರನ್ನು ವಿಪರೀತ ವೇಗದಲ್ಲಿ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.


ಮೃತಪಟ್ಟ ಓಂಶ್ರೀ ನಗರದ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ನಿವಾಸಿ. ಅಮನ್ ರಾವ್ ಅವರು ಕದ್ರಿಯ ನಿವಾಸಿ. ಕಾರಿನಲ್ಲಿ ಒಟ್ಟು 5 ಮಂದಿ ಇದ್ದು, ಓಂಶ್ರೀ ಅವರು ಚಾಲಕನ ಹಿಂಭಾಗದ ಸೀಟಿನಲ್ಲಿ ಕುಳಿತ್ತಿದ್ದರು ಎನ್ನಲಾಗಿದೆ. ಗಂಭೀರ
ಗಾಯಗೊಂಡಿರುವ ವಂಶಿ ಹಾಗೂ ಆಶಿಕ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದ ಇನ್ನೊರ್ವ ಅಪಾಯದಿಂದ ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು