11:47 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಂಗಳೂರು: ಹೊಟೇಲ್ ಈಜುಕೊಳದಲ್ಲಿ ಬ್ಯಾಂಕ್ ಅಧಿಕಾರಿ ಮುಳುಗಿ ಸಾವನ್ಬಪ್ಪಿದ ಸ್ಥಿತಿಯಲ್ಲಿ ಪತ್ತೆ

11/09/2023, 16:03

ಮಂಗಳೂರು(reporterkarnataka.com): ನಗರದ ಪಳ್ನೀರ್ ರಸ್ತೆಯಲ್ಲಿರುವ ಪ್ರತಿಷ್ಠಿತ ಹೊಟೇಲ್ಲೊಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೃತಪಟ್ಟವರನ್ನು ಕೇರಳದ ತಿರುವನಂತಪುರಂ ನಿವಾಸಿ, ಗೋಪು ಆರ್. ನಾಯರ್ ಎಂದು ಗುರುತಿಸಲಾಗಿದೆ. ಇವರು
ಯುನಿಯನ್ ಬ್ಯಾಂಕ್ ಅಧಿಕಾರಿ ಎಂದು ತಿಳಿದು ಬಂದಿದೆ.
ಗೋಪು ಆ‌ರ್ ನಾಯರ್ ಅವರು ಭಾನುವಾರ
ಹೊಟೇಲ್ ನಲ್ಲಿ ಉಳಿದುಕೊಂಡಿದ್ದರು. ಇಂದು ಮುಂಜಾನೆ 4 ಗಂಟೆ ವೇಳೆಗೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು. ನಂತರ ಬೆಳಗ್ಗಿನ ಹೊತ್ತಿಗೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶವ ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿದ್ದು ಆತ್ಮಹತ್ಯೆಯೋ, ಅಕಸ್ಮಾತ್ ನೀರಿಗೆ ಬಿದ್ದು ಮೃತಪಟ್ಟಿದ್ದಾರೆಯೋ ಗೊತ್ತಿಲ್ಲ. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು