ಇತ್ತೀಚಿನ ಸುದ್ದಿ
Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ: ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ
01/04/2025, 19:43

ಮಂಗಳೂರು(reporterkarnataka.com):ನಗರದ ಬಿಜೈನಲ್ಲಿರುವ ಜೈಲಿಗೆ ಅಳವಡಿಸಿರುವ ಜಾಮರ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಅದನ್ನು ತಕ್ಷಣ ತರವುಗೊಳಿಸದಿದ್ದರೆ ಜೈಲಿನೊಳಗೆ ನುಗ್ಗಿ ಜಾಮರ್ ಕಿತ್ತು ಬಿಸಾಕ ಬೇಕಾಗುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ ನೀಡಿದ್ದಾರೆ.
Video Player
00:00
00:00
ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ವಿಪರೀತ ತೊಂದರೆಯಾಗುತ್ತಿದ್ದು ಸಂಬಂಧಪಟ್ಟವರು ನಮ್ಮ ಯಾವುದೇ ಮನವಿಗೂ ಸ್ಪಂದಿಸುತ್ತಿಲ್ಲ. ಹಾಗಾಗಿ, ಏಪ್ರಿಲ್ 3ರೊಳಗೆ ಜೈಲಿನ ಜಾಮರ್ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಏಪ್ರಿಲ್ 4ರಂದು ಸಾರ್ವಜನಿಕರ ಪರವಾಗಿ ಬಿಜೆಪಿ ಕಾರ್ಯಕರ್ತರೆಲ್ಲರೂ ಸೇರಿಕೊಂಡು ರಾಸ್ತಾ ರೋಕೋ ನಡೆಸಿ, ಜೈಲಿನೊಳಗೆ ನುಗ್ಗಿ ಜಾಮರ್ ಕಿತ್ತು ಬಿಸಾಕ ಬೇಕಾಗುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.