6:44 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Mangaluru | ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭ

19/06/2026, 18:31

ಮಂಗಳೂರು(reporterkarnataka.com): ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ 2026-27 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.

ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶವನ್ನು ಹೊಂದಿತ್ತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಯಿತು. ನಂತರ ಮುಖ್ಯ ಅತಿಥಿಗಳು, ಸಂಚಾಲಕರು, ಪ್ರಾಂಶುಪಾಲರು ಮತ್ತು ಇತರ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ವಿದ್ಯಾರ್ಥಿ ಪರಿಷತ್ತನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಂಸಿಸಿ ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೊ ಅವರು ಮಾತನಾಡಿ, ‘ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುವುದು ಬಹಳ ಮುಖ್ಯ’ ಎಂದು ವಿವರಿಸಿದರು.
ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಝೈನ್ ಶೇಖ್ ಜಾಕಿರ್, ಉಪಾಧ್ಯಕ್ಷೆ ಸಿಂಚನಾ, ವಿವಿಧ ಕ್ಷೇತ್ರದ ಕಾರ್ಯದರ್ಶಿಗಳು ಮತ್ತು ಇತರ ಪದಾಧಿಕಾರಿಗಳಿಗೆ ಗಣ್ಯರು ಬ್ಯಾಡ್ಜ್ ಗಳನ್ನು ವಿತರಿಸಿ ಗೌರವಿಸಿದರು. ನಂತರ ಕಾಲೇಜಿನ ಪ್ರಾಂಶುಪಾಲರಾದ ಮೆಲ್ವಿನ್ ವಾಸ್ ಅವರು ನೂತನ ಸದಸ್ಯರಿಗೆ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತೆ ಪ್ರತಿಜ್ಞಾವಿಧಿ ಬೋಧಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಿಲಾಗ್ರಿಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರೂ ಆಗಿರುವ ಅತೀ. ವಂದನೀಯ ಗುರುಗಳಾದ ಐವನ್ ಮೈಕಲ್ ರೊಡ್ರಿಗಸ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, “ವಿದ್ಯಾರ್ಥಿ ಜೀವನವು ಕೇವಲ ಶಿಕ್ಷಣಕ್ಕೆ ಸೀಮಿತವಾಗಿರದೆ, ಶಿಸ್ತು , ನಾಯಕತ್ವ, ಸಮಯಪ್ರಜ್ಞೆ ಮತ್ತು ವ್ಯಕ್ತಿತ್ವ ವಿಕಸನವನ್ನು ರೂಢಿಸಿಕೊಳ್ಳುವ ಸುವರ್ಣಾವಕಾಶವಾಗಿದೆ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕ್ಯಾಂಪಸ್ ನಿರ್ದೇಶಕರು ಹಾಗೂ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಅತೀ. ವಂದನೀಯ ಗುರುಗಳಾದ ಡಾ| ಆಲ್ವಿನ್ ಸೆರಾವೊ , ಮಿಲಾಗ್ರಿಸ್ ಸಿಬಿಎಸ್ಇ ಶಾಲೆಯ ಪ್ರಾಂಶುಪಾಲರು ವಂದನೀಯ ಗುರುಗಳಾದ ಉದಯ ಫೆರ್ನಾಂಡಿಸ್ , ಮಿಲಾಗ್ರಿಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಡಿಕ್ಸನ್ ಡಿಸೋಜಾ , ಕಾರ್ಯದರ್ಶಿ ಜಸಿಂತಾ ಫೆರ್ನಾಂಡಿಸ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಲಿಡ್ವಿನ್ ಫೆರ್ನಾಂಡಿಸ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಸಂಯೋಜಕಿಯಾದ ಶೆರಿಲ್ ಪಿಂಟೊ ಅವರು ಸ್ವಾಗತಿಸಿದರು. ಕಾಲೇಜು ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಝೈನ್ ಶೇಖ್ ಜಾಕಿರ್ ನೆರೆದಿದ್ದ ಎಲ್ಲ ಗಣ್ಯರಿಗೆ, ಉಪನ್ಯಾಸಕರಿಗೆ ವಿದ್ಯಾರ್ಥಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕೊನೆಯಲ್ಲಿ ಕಾಲೇಜು ಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು