4:24 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

Mangaluru | ಪಾದುವ ಪದವಿಪೂರ್ವ ಕಾಲೇಜಿನ ಪಾದುವನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

25/06/2026, 10:05

ಮಂಗಳೂರು(reporterkarnarltaka.com): ಉತ್ತಮ ನಾಯಕನಾದವ ಪೆನ್ಸಿಲ್ ಮತ್ತು ರಬ್ಬರ್ ಇದ್ದಂತೆ. ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳುತ್ತಾ ಸಮಾಜಕ್ಕೆ ಮಾದರಿಯಾಗಿ ಬೆಳೆಯಬೇಕು ಎಂದು ಸಂತ ಲಾರೆನ್ಸ್ ಅಂಗ್ಲ ಮಾಧ್ಯಮ ಪ್ರೌಢಶಾಲೆ ಬೊಂದೇಲ್ ನ ಮುಖ್ಯೋಪಾಧ್ಯಾಯ ವಂದನೀಯ ಫಾ. ಪೀಟರ್ ಗೊನ್ಸಾಲ್ವಿಸ್ ಹೇಳಿದ್ದಾರೆ.
ಪಾದುವ ಪದವಿಪೂರ್ವ ಕಾಲೇಜಿನ ಪಾದುವನ್ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಸಮಾರಂಭದಲ್ಲಿ ಭಾಗವಹಿಸಿದ್ದ ಇನ್ನೋರ್ವ ಅತಿಥಿ 92.7 ಬಿಗ್ ಎಫ್.ಎಂ ನ ಆರ್ ಜೆ ನಯನಾ ಶೆಟ್ಟಿ ಮಾತನಾಡಿ ನಮ್ಮ ಬದುಕಿನಿಂದ ಬೇರೆಯವರ ಬದುಕನ್ನು ಬದಲಾವಣೆ ಮಾಡುವುದೇ ನಿಜವಾದ ಬದುಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ವಿದ್ಯಾರ್ಥಿ ಜೀವನದಲ್ಲಿ ಸರಿಯಾದ ಗುರಿಯೊಂದಿಗೆ ರೂಪಿಸಬೇಕು. ಆಗ ಬದುಕು ಸುಂದರವಾಗಿ ರೂಪುಗೊಳ್ಳುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಪಾದುವ ವಿದ್ಯಾಸಂಸ್ಥೆಗಳ ಕ್ಯಾಂಪಸ್ ನಿರ್ದೇಶಕರು ಮತ್ತು ಪಾದುವ ಪದವಿ ಕಾಲೇಜಿನ ಪ್ರಾಂಶುಪಾಲ ಅರುಣ್ ವಿಲ್ಸನ್ ಲೋಬೋ ಮಾತನಾಡಿ, ನಾವು ಸರಿಯಾದ ಮಾರ್ಗವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡಾಗ ಮಾತ್ರ ಬದುಕನ್ನು ಸುಂದರವಾಗಿ ರೂಪಿಸಲು ಸಾಧ್ಯ ಎಂದರು.
ಪಾದುವ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ರೋಶನ್ ಸಾಂತುಮಯೋರ್, ಅತಿಥಿಗಳನ್ನು ಸ್ವಾಗತಿಸಿ. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ವಿದ್ಯಾರ್ಥಿ ಸಂಘದ ಸಂಯೋಜಕರಾದ ಲಾವಿಯಾ ಮೊಂತೆರೊ, ರೇಷ್ಮಾ ವಿನಯ್, ವಿದ್ಯಾರ್ಥಿ ನಾಯಕ ನವನೀತ್ ಡಿ.ಕೆ. ಉಪನಾಯಕಿ ತನುಶ್ರೀ, ಕಾರ್ಯದರ್ಶಿ ಸ್ವಾತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಅದಿತಿ ವಂದಿಸಿದರೆ, ವಿದ್ಯಾರ್ಥಿನಿ ಧನಶ್ರೀ ಕಾರ್ಯಕ್ರಮ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು