7:36 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಂಗಳೂರು | ಅತ್ತಾವರ ಕಟ್ಟೆಯಲ್ಲಿ ಸದ್ಭಾವನಾ ವೇದಿಕೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

15/08/2026, 23:32

ಮಂಗಳೂರು(reporterkarnataka.com):ನಗರದ ಜಪ್ಪು ವೃತ್ತದ ಸದ್ಭಾವನಾ ವೇದಿಕೆಯ ವತಿಯಿಂದ ಬಿಜೈ ಲಯನ್ಸ್ ಕ್ಲಬ್‌ನ ಸಹಯೋಗದಲ್ಲಿ ಅತ್ತಾವರ ಕಟ್ಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿದ ಬಿಜೈ ಲಯನ್ಸ್ ಕ್ಲಬ್‌ನ ಅಧ್ಯಕ್ಷೆ ಲಯನ್ಸ್ ಪ್ರೀತಿ ಡಿ’ಸೋಜಾ ಮಾತನಾಡಿ, “ಸ್ವಾತಂತ್ರ್ಯದ 80 ವರ್ಷಗಳಲ್ಲಿ ಭಾರತವು ಹಲವಾರು ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ನಮ್ಮ ದೇಶ ಗಡಿಗಳಲ್ಲಿ ಮಾತ್ರ ಭದ್ರವಾಗಿದ್ದರೆ ಸಾಲದು; ದೇಶದ ಒಳಗೂ ಒಗ್ಗಟ್ಟು ಮತ್ತು ಏಕತೆಯ ಶಕ್ತಿಯನ್ನು ಪ್ರದರ್ಶಿಸಬೇಕು” ಎಂದು ಹೇಳಿದರು.
ಸದ್ಭಾವನಾ ವೇದಿಕೆಯ ಅಧ್ಯಕ್ಷ ದಿವಾನ್ ಕೇಶವ ಭಟ್ ಅವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿ, “ನಾವೆಲ್ಲರೂ ಒಂದಾಗಿ, ಜಾತಿ-ಮತ ಭೇದವಿಲ್ಲದ ಸುಂದರ ಹಾಗೂ ಸೌಹಾರ್ದಯುತ ಭಾರತವನ್ನು ನಿರ್ಮಿಸೋಣ” ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸದ್ಭಾವನಾ ವೇದಿಕೆ ಹಾಗೂ ಬಿಜೈ ಲಯನ್ಸ್ ಕ್ಲಬ್‌ನ ಪದಾಧಿಕಾರಿಗಳು, ಸದಸ್ಯರು ಮತ್ತು ವಿವಿಧ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು