10:57 AM Sunday22 - December 2024
ಬ್ರೇಕಿಂಗ್ ನ್ಯೂಸ್
ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು… ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ…

ಇತ್ತೀಚಿನ ಸುದ್ದಿ

ಮಂಗಳೂರು ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನ ಆಚರಣೆ

02/05/2024, 14:47

ಮಂಗಳೂರು(reporterkarnataka.com): ಮಂಗಳೂರಿನ ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನವನ್ನು ನಗರದ ಹಂಪನಕಟ್ಟೆಯ ಮಿಲಾಗ್ರಿಸ್ ಹಾಲ್ ಕಾಂಪ್ಲೆಕ್ಸ್‌ನಲ್ಲಿ ಬೆಳಿಗ್ಗೆ 10 ಗಂಟೆಗೆ ಆಚರಿಸಲಾಯಿತು. ಮೊದಲನೆಯದಾಗಿ ಸಮಾರಂಭವು ಮುಖ್ಯ ಅತಿಥಿ ಮತ್ತು ಗೌರವ ಅತಿಥಿಗಳೊಂದಿಗೆ ಪದವೀಧರರ ಭವ್ಯ ಮೆರವಣಿಗೆಯಿಂದ ಪ್ರಾರಂಭವಾಯಿತು. ಇಂದಿರಾ ನರ್ಸಿಂಗ್ ಕಾಲೇಜಿನ ಸಹಾಯಕ ಉಪನ್ಯಾಸಕರಾದ ಪವಿತ್ರ ಪೂಜಾರಿ ಅವರು ಅತಿಥಿಗಳು, ಪೋಷಕರು, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರನ್ನು ಸ್ವಾಗತಿಸಿದರು.
ಜಿಲ್ಲಾ ಶಸ್ತ್ರಚಿಕಿತ್ಸಕರಾದ ಜಿಲ್ಲಾ ವೈದ್ಯಾಧಿಕಾರಿ ಡಾ.ಜೆಸಿಂತಾ ಡಿಸೋಜ, ಡಿಎಂ, ಡಿಎ, ಡಿಎನ್‌ಎಂ ಮುಖ್ಯ ಅತಿಥಿಗಳಾಗಿದ್ದರು. ಉಷಾ ಮುಕ್ಕುಂದ್ ಭಂಡಾರಿ, ಸಹಾಯಕ ನರ್ಸಿಂಗ್ ನಿರ್ದೇಶಕರು, ವೈದ್ಯಕೀಯ ಶಿಕ್ಷಣ ನಿರ್ದೇಶಕರು, ಬೆಂಗಳೂರು ಮತ್ತು ಡಾ. ವೈಶಾಲಿ, ಅಧ್ಯಕ್ಷರು, ಅಧ್ಯಯನ ಮಂಡಳಿ, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, RGUHS, ಬೆಂಗಳೂರು ಇವರು ಗೌರವಾನ್ವಿತ ಅತಿಥಿಗಳಾಗಿದ್ದರು. ಇಂದಿರಾ ಎಜುಕೇಶನಲ್ ಟ್ರಸ್ಟ್‌ನ ಪಿಆರ್‌ಒ ಸಾಜಿ ಪಿ ಆರ್., ಇಂದಿರಾ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಸೈಯದ್ ನಿಜಾಮುದ್ದೀನ್ ಉಪಸ್ಥಿತರಿದ್ದರು. ನರ್ಸಿಂಗ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಗ್ರೀಶಾ ಜೋಸ್, ಇಂದಿರಾ ಕಾಲೇಜ್ ಆಫ್ ಅಲೈಡ್ ಮತ್ತು ಹೆಲ್ತ್ ಸೈನ್ಸಸ್‌ನ ಉಪ ಪ್ರಾಂಶುಪಾಲರಾದ ರಮ್ಯಾ ಎಸ್. ನಾಯರ್ ಮತ್ತು ಪ್ರಭಾರಿ ಪ್ರಾಂಶುಪಾಲರಾದ ಡಾ. ಎನ್. ಜಿಯೋವಿಯಾ ಮತ್ತು ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಜಾರ್ಜ್(ಪಿಟಿ) ಸೇರಿದಂತೆ ಡಯಾಸ್‌ನಲ್ಲಿರುವ ಇತರ ಗಣ್ಯರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಸಂಬಂಧಪಟ್ಟ ಪ್ರಾಂಶುಪಾಲರು, ಉಪಪ್ರಾಂಶುಪಾಲರು ಮತ್ತು ಪ್ರಭಾರಿ ಪ್ರಾಂಶುಪಾಲರು ಕಾಲೇಜುಗಳ ವಾರ್ಷಿಕ ವರದಿ ವಾಚಿಸಿದರು. ಮುಖ್ಯ ಅತಿಥಿಗಳಾದ ಡಾ. ಜೆಸಿಂತಾ ಡಿಸೋಜ ಅವರು ಆರೋಗ್ಯ ರಕ್ಷಣೆಯ ವೃತ್ತಿಗಳ ಬಗ್ಗೆ ತಮ್ಮ ಜ್ಞಾನವನ್ನು ಹಂಚಿಕೊಂಡರು.
ಎಂಎಸ್ಸಿ ನರ್ಸಿಂಗ್, ಬಿ.ಎಸ್ಸಿ. ನರ್ಸಿಂಗ್. ಪೋಸ್ಟ್ ಬೇಸಿಕ್ B.Sc ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸಸ್, GNM ಮತ್ತು ಪ್ಯಾರಾಮೆಡಿಕಲ್ ಸೈನ್ಸಸ್ ವಿದ್ಯಾರ್ಥಿಗಳು ಡಿಪ್ಲೋಮಾ ಮತ್ತು ಪ್ರಮಾಣಪತ್ರಗಳನ್ನು ಪಡೆದರು. ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಡಾ ಸೈಯದ್ ನಿಜಾಮುದ್ದೀನ್ ಅವರಿಂದ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಫಿಸಿಯೋಥೆರಪಿಯ ಸಹಾಯಕ ಉಪನ್ಯಾಸಕರಾದ ಡಾ. ಸಾನಿಯಾ ಪ್ರವೀಣ್ ಅವರ ವಂದನಾರ್ಪಣೆಯೊಂದಿಗೆ ದಿನವು ಮುಕ್ತಾಯಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು