12:14 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

Mangaluru | ಅಂತರ್ ಜಿಲ್ಲಾ ಖದೀಮ ಕಳ್ಳನ ಸೆರೆ: 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ವಶ

01/03/2025, 22:58

ಮಂಗಳೂರು(reporterkarnataka.com): ದಿಚಕ್ರ ವಾಹನಗಳನ್ನು ಕಳ್ಳತನ ಮಾಡುವುದರಲ್ಲಿ ನಿಸ್ಸೀಮನಾದ
ಅಂತರ್ ಜಿಲ್ಲಾ ಕಳ್ಳನನ್ನು ನಗರದ ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪ್ರಮುಖ ಆರೋಪಿ ಶಿವಮೊಗ್ಗ ಜಿಲ್ಲೆಯ ಸೊರಬದ ಮಣಿಕಂಠ ಗೌಡ ಕೆ. (25) ಎಂದು ಗುರುತಿಸಲಾಗಿದೆ.
ಬಂಧಿತ ಮಣಿಕಂಠ ಗೌಡನಿಂದ 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಜಾತ್ರೆ, ಕಂಬಳೋತ್ಸವ, ಬಸ್ಸು, ರೈಲ್ವೆ ನಿಲ್ದಾಣಗಳಲ್ಲಿ ನಿಲ್ಲಿಸಿ ಹೋಗಿರುವ ಬೈಕ್‌ಗಳನ್ನು ಕದಿಯುತ್ತಿದ್ದ ಖದೀಮ, ವಾಹನಗಳ ಇಗ್ನಿಷನ್ ಸಾಕೆಟ್‌ನ ಪ್ಲಗನ್ನು ಚಾಕಚಕ್ಯತೆಯಿಂದ ತಪ್ಪಿಸಿ, ಕ್ಷಣಾರ್ಧದಲ್ಲಿ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ. ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್‌ಗಳಿಗೆ ರೀಸೇಲ್ ವ್ಯಾಲ್ಯೂ ಇರುವುದರಿಂದ ಅದನ್ನೇ ಟಾರ್ಗೆಟ್ ಮಾಡುತ್ತಿದ್ದ ಮಣಿಕಂಠ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಕುಟುಂಬದೊಂದಿಗೆ ಮೂಡಬಿದಿರೆಯಲ್ಲಿ ವಾಸ್ತವ್ಯವಿದ್ದ ಎಂದು ತಿಳಿದು ಬಂದಿದೆ.
ಕದ್ದ ಬೈಕ್‌ಗಳನ್ನು ಮಾರಾಟ ಮಾಡುತ್ತಿದ್ದ ಕಾರ್ಕಳದ ಸತೀಶ್ ಬಂಗೇರ, ಮೂಡಬಿದಿರೆಯ ದೀಕ್ಷಿತ್, ತಾಳಿಕೋಟೆಯ ಸಂಗಣ್ಣ ಹೊನ್ನಳ್ಳಿ ಎಂಬರನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು