12:14 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮಂಗಳೂರು: ಚಿಕ್ಕಮ್ಮನ ಮನೆಗೆ ಜಾತ್ರೆಗೆಂದು ಬಂದ ಯುವಕ ನೇಣು ಬಿಗಿದು ಆತ್ಮಹತ್ಯೆ 

08/03/2022, 11:42

ತೊಕ್ಕೊಟ್ಟು (reporterkarnataka.com): 

ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ಭಾನುವಾರ ನಡೆದಿದೆ.

ಪಿಲಾರು ಜಾತ್ರೆಗೆಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಪಡೀಲ್ ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.

ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಪಂಜಂದಾಯ ದೈವದ ದೊಂಪದ ಬಲಿ ಉತ್ಸವ ನಡೆಯುತ್ತಿದ್ದು, ಹೀಗಾಗಿ ಪಿಲಾರು ಪ್ರಕಾಶ್ ನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಸೌರವ್ ತನ್ನ ತಾಯಿ ಜತೆ ಆಗಮಿಸಿದ್ದ. 

ಜಾತ್ರೆಗೆ ತೆರಳಿ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿದ್ದ ಸೌರವ್ ನಿದ್ದೆ ಬರುತ್ತದೆ ಎಂದು ಹೇಳಿ ಕೋಣೆಗೆ ತೆರಳಿದ್ದಾನೆನ್ನಲಾಗಿದೆ. ಸಂಜೆಯ ವೇಳೆ ತಾಯಿ ಮಗನನ್ನ ಎಬ್ಬಿಸಲು ಹೋದಾಗ ಸೌರವ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಗೈದ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸ್‍ ದೂರಿನಲ್ಲಿ ತಿಳಿಸಲಾಗಿದೆ.

ಮೃತರು ತಂದೆ ತಾಯಿ ಸಹೋದರ ಸಹೋದರಿಯರನ್ನು ಅಗಲಿದ್ದಾನೆ.ಉಳ್ಳಾಲ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು