4:43 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಂಗಳೂರು: ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಮುತ್ತಿಗೆ

11/01/2023, 22:15

ಮಂಗಳೂರು(reporterkarnataka.com): ನಗರದಲ್ಲಿ ಕಾರ್ಯಾಚರಿಸುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗೆ ಡಿವೈಎಫ್ ಐ ವತಿಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಜುಗಾರಿ ಅಡ್ಡೆ, ವಿಡಿಯೋ ಗೇಮ್, ಸ್ಕಿಲ್ ಗೇಮ್ ಗಳಂತಹ ಜೂಜುಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಬುಧವಾರ ಡಿವೈಎಫ್ಐ ಕಾರ್ಯಕರ್ತರು ನಗರ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ಜೂಜು ಕೇಂದ್ರಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಬಾಗಿಲು ಮುಚ್ಚಿಸಿದರು.

ಈ ವೇಳೆ ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ. ಇಂಮ್ತಿಯಾಜ್ ಮಾತನಾಡಿ, ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯೊಳಗೆ ದಿನೇ ದಿನೇ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ. ರಿಕ್ರಿಯೇಶನ್ ಕ್ಲಬ್ ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟಕ್ಕೆ ಜನರನ್ನು ಬಲಿಪಡೆಯುತ್ತಿದೆ. ನಗರದ ಸಣ್ಣ ವ್ಯಾಪಾರಿಗಳು , ಕಾರ್ಮಿಕರು ,ವಿದ್ಯಾರ್ಥಿಗಳನ್ನು ಒಳಗೊಂಡಂತೆ ಬಡ ಮಧ್ಯಮ ವರ್ಗದ ಕೂಲಿ ಕಾರ್ಮಿಕರನ್ನು ಈ ಅಡ್ಡೆ ಗುರಿಯಾಗಿಸಿ ಜನರ ದುಡಿಮೆಯ ಹಣವನ್ನು ದೋಚುವ ಕಾರ್ಯದಲ್ಲಿ ತೊಡಗಿದೆ. ಈ ಮೋಸದಾಟಕ್ಕೆ ಸಿಲುಕಿದ ಬಹಳಷ್ಟು ಕುಟುಂಬಗಳು ತಮ್ಮ ಮನೆ, ಮಠ ಅಮೂಲ್ಯ ಸೊತ್ತುಗಳನ್ನು ಕಳಕೊಂಡು ಬೀದಿಗೆ ಬಿದ್ದಿವೆ. ಇಂತಹ ಅಕ್ರಮ ಜೂಜು ಕೇಂದ್ರಗಳ ವಿರುದ್ಧ ಸಾರ್ವಜನಿಕರು ಬಹಳಷ್ಟು ವಿರೋಧ ವ್ಯಕ್ತಪಡಿಸಿದರೂ ಸ್ಥಳೀಯ ಠಾಣೆಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಬರೀ ತೋರಿಕೆಗಷ್ಟೆ ಬಂದ್ ಮಾಡುವ ನಾಟಕ ಮಾಡಿ ಮತ್ತೆ ಕೆಲದಿನದ ನಂತರ ಯಥಾ ಸ್ಥಿತಿಯಾಗಿ ಜೂಜು ಕೇಂದ್ರಗಳು ಕಾರ್ಯಾಚರಿಸುತ್ತವೆ ಎಂದರು.

ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಜಿಲ್ಲಾ ಕೋಶಾಧಿಕಾರಿ ಮನೋಜ್ ವಾಮಂಜೂರ್, ನವೀನ್ ಕೊಂಚಾಡಿ, ಹನೀಫ್ ಬೇಂಗ್ರೆ, ಮುಸ್ತಫ ಕಲ್ಲಕಟ್ಟೆ, ರಿಯಾಬ್, ಆಸೀಫ್, ಸಾಧಿಕ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು