9:52 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಮಂಗಳೂರು: ಖಾಕಿ ಮಹಿಳೆಯರಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಆರಂಭ

14/09/2022, 21:25

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ವೃತ್ತಿ ನಿಭಾಯಿಸುವುದರ ಜತೆಗೆ ಕೌಟುಂಬಿಕ ನಿರ್ವಹಣೆ ಬಗ್ಗೆ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ನಗರದ ಪೊಲೀಸ್ ಕಮಿಷನರೇಟ್ ವತಿಯಿಂದ 3 ದಿನಗಳ ಒತ್ತಡ ನಿರ್ವಹಣೆ ತರಬೇತಿ ಕಾರ್ಯಾಗಾರ ಆರಂಭಿಸಲಾಗಿದೆ. 


ಬುಧವಾರ ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಇದರ ಉದ್ಘಾಟನಾ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ‘ಕೆಲವು ವರ್ಷಗಳ ಈಚೆಗೆ ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಸಂಖ್ಯೆ ಹೆಚ್ಚಿದೆ. ವೃತ್ತಿ ಬದುಕಿನಲ್ಲಿ ಸಾಕಷ್ಟು ಒತ್ತಡ ಎದುರಿಸುವ ಪೊಲೀಸರು, ಅದರಲ್ಲೂ ವಿಶೇಷವಾಗಿ ಮಹಿಳಾ ಸಿಬ್ಬಂದಿಯ ಕರ್ತವ್ಯದಲ್ಲಿ ಇನ್ನಷ್ಟು ಹೆಚ್ಚು ದಕ್ಷತೆ, ಮಾನವೀಯ ಮೌಲ್ಯಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ತರಬೇತಿ ಆಯೋಜಿಸಲಾಗಿದೆ ಎಂದರು.


ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮಹತ್ವದ್ದಾಗಿದೆ. ಪರಿಸ್ಥಿತಿ ನಿಭಾಯಿಸುವ ಕಲೆ ಅರಿತರೆ, ಕೆಲಸ ಸುಲಭವಾಗುತ್ತದೆ ಎಂದು ಪೊಲೀಸ್ ಕಮಿಷನರ್ ನುಡಿದರು.

ಆರ್ಟ್ ಆಫ್ ಲಿವಿಂಗ್‍ನ ತರಬೇತುರ್ತಿ ರಶ್ಮಿ ಅನಿಲ್ ಕುಮಾರ್, ಡಿಸಿಪಿಗಳಾದ ಅಂಶು ಕುಮಾರ್, ದಿನೇಶ್ ಕುಮಾರ್, ಟ್ರಾಫಿಕ್ ಎಸಿಪಿ ಗೀತಾ ಕುಲಕರ್ಣಿ ಉಪಸ್ಥಿತರಿದ್ದರು.

ಇನ್‌ಸ್ಪೆಕ್ಟರ್‌ ಭಾರತಿ ಸ್ವಾಗತಿಸಿದರು. ಎಸಿಪಿ ಪಿ.ಎ. ಹೆಗಡೆ ವಂದಿಸಿದರು.

ಯಾವಾಗಲೂ ಖಾಕಿ ತೊಟ್ಟು ಡ್ಯೂಟಿಯಲ್ಲಿರುವ ಮಹಿಳಾ ಪೊಲೀಸರು, ಶ್ವೇತ ವಸ್ತ್ರ ಧರಿಸಿ ತರಬೇತಿಯಲ್ಲಿ ಭಾಗವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು