8:42 PM Friday4 - April 2025
ಬ್ರೇಕಿಂಗ್ ನ್ಯೂಸ್
Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು: ಕಾರು ಚಲಾಯಿಸುತ್ತಿದ್ದಾಗಲೇ ಹೃದಯಾಘಾತ; ಟೆಂಪೋ ಟ್ರಾವೆಲರ್‌ಗೆ ಡಿಕ್ಕಿ; ಚಾಲಕ ಸಾವು

03/02/2022, 15:16

ಮಂಗಳೂರು:(reporterkarnatak ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತವಾಗಿ ನಿಂತಿದ್ದ ಟೆಂಪೋ ಟ್ರಾವೆಲರ್‌ಗೆ ಢಿಕ್ಕಿ ಹೊಡೆದು ಚಾಲಕನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟ ಘಟನೆ ನಗರದ ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಎದುರು ನಿನ್ನೆ ನಡೆದಿದೆ.

ಮೃತ ಕಾರು ಚಾಲಕನನ್ನು ಪಾಂಡೇಶ್ವರ ನಿವಾಸಿ ಮುಹಮ್ಮದ್ ಶರೀಫ್ ಇಸ್ಮಾಯಿಲ್ (57) ಎಂದು ಗುರುತಿಸಲಾಗಿದೆ.


ಮೃತ ಕಾರು ಚಾಲಕನನ್ನು ಪಾಂಡೇಶ್ವರ ನಿವಾಸಿ ಮುಹಮ್ಮದ್ ಶರೀಫ್ ಇಸ್ಮಾಯಿಲ್ (57) ಎಂದು ಗುರುತಿಸಲಾಗಿದೆ.

ಇಸ್ಮಾಯಿಲ್ ನಿನ್ನೆ ತನ್ನ ಟೂರಿಸ್ಟ್ ಕಾರನ್ನು ಮಧ್ಯಾಹ್ನ ಮಂಗಳಾದೇವಿ ಮಂಕಿಸ್ಟಾಂಡ್ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಹೃದಯಘಾತವಾಗಿದೆ.

ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಟೆಂಪೋ ಟ್ರಾವೆಲರ್‌ನ ಹಿಂಭಾಗದ ಎಡಬದಿಗೆ ಢಿಕ್ಕಿ ಹೊಡೆಯಿತು.

ಟೆಂಪೋಟ್ರಾವೆಲರ್ ಮುಂದೆ ನಿಂತಿದ್ದ ಬೈಕ್ ಅಪ್ಪಚ್ಚಿಯಾಗಿದೆ. ಅಪಘಾತದ ರಭಸಕ್ಕೆ ಇಸ್ಮಾಯೀಲ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಸಾರ್ವಜನಿಕರು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.

ಆದರೆ ದಾರಿಮಧ್ಯೆಯೇ ಇಸ್ಮಾಯಿಲ್ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿರುವ ಸಂಚಾರ ಪೂರ್ವ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು