1:47 AM Monday13 - January 2025
ಬ್ರೇಕಿಂಗ್ ನ್ಯೂಸ್
ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ?: ರಾಜ್ಯ ಸರ್ಕಾರದ ವಿರುದ್ಧ… ರಾಷ್ಟ್ರೀಯ ಜಲಮಾರ್ಗಗಳ ಪ್ರಮುಖ ಮೂಲಸೌಕರ್ಯ ನವೀಕರಣಕ್ಕೆ 5 ವರ್ಷಗಳಲ್ಲಿ 50,000 ಕೋಟಿ ಹೂಡಿಕೆ… ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್‌” ಮಾಡುವುದೇ ನಮ್ಮ ಸರ್ಕಾರದ ಗುರಿ!;ಜಿಟಿಟಿಸಿ ಕೈಗಾರಿಕೆ-ಶೈಕ್ಷಣಿಕ ಸಮಾವೇಶದಲ್ಲಿ… ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

ಇತ್ತೀಚಿನ ಸುದ್ದಿ

ಮಂಗಳೂರು ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಆಚರಣೆ; ರಂಗಗೀತೆ, ಜಾನಪದ ಗೀತೆ ಗಾಯನ

16/01/2024, 17:23

ಮಂಗಳೂರು(reporterkarnataka com): ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಮತ್ತು ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಬಂಟ್ವಾಳದ ಮೂಡಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಅರವಿಂದ ಕುಡ್ಲ ಮತ್ತು ಬೈಕಂಪಾಡಿ ಸರ್ಕಾರಿ ಪ್ರೌಢ ಶಿಕ್ಷಣ ಶಾಲೆಯ ಶಿಕ್ಷಕರಾದ ಪ್ರೇಮನಾಥ್ ಆಚಾರ್ಯ ಅವರ ನೇತೃತ್ವದಲ್ಲಿ ಯುವ ಕಲಾವಿದರ ತಂಡ ಜಾಗೃತಿ ಗೀತೆಗಳು, ಜಾನಪದ ಗೀತೆ ಮತ್ತು ಲಾವಣಿಗಳ ಮೂಲಕ ವಿಚಾರಣಾಧೀನ ಖೈದಿಗಳ ಮನ ರಂಜಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರಾಗೃಹದ ಅಧೀಕ್ಷಕರಾದ ಓಬಳೇಶಪ್ಪ ಅವರು ವಹಿಸಿದರು. ವಿಚಾರಣಾಧೀನ ಖೈದಿಗಳ ಮನದಲ್ಲಿ ಪರಿವರ್ತನೆ ತಂದು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇದೊಂದು ಅಪೂರ್ವ ಕಾರ್ಯಕ್ರಮ ಎಂದು ಓಬಳೇಶಪ್ಪ ಅವರು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ವಕೀಲರಾದ ಸುಕೇಶ್ ಕುಮಾರ್ ಶೆಟ್ಟಿ ಪ್ರಾಧಿಕಾರದಿಂದ ದೊರೆಯುವ ಕಾನೂನು ನೆರವಿನ ಬಗ್ಗೆ ವಿವರಿಸಿದರು.
ಕೆನರಾ ಹೈಸ್ಕೂಲ್ ಮತ್ತು ಸಂತ ಅಲೋಷಿಯಸ್ ಹೈಸ್ಕೂಲ್‌ನ ವಿದ್ಯಾರ್ಥಿಗಳೂ ರಂಗ ಗೀತೆಗಳು, ಜಾನಪದ ಗೀತೆಗಳನ್ನು ಹಾಡಿ ವಿಚಾರಣಾಧೀನ ಖೈದಿಗಳಲ್ಲಿ ಜಾಗೃತಿ ಮೂಡಿಸಿದರು.
ಹಬ್ಬದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖೈದಿಗಳೂ ಚಪ್ಪಾಳೆ ತಟ್ಟಿ, ಹಾಡಿಗೆ ದನಿಗೂಡಿಸಿ ಸಂಭ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು