7:22 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರು- ಕಾಸರಗೋಡು ಬಸ್ ಸಂಚಾರ ನಾಳೆಯಿಂದ ಆರಂಭ: ಷರತ್ತು ಅನ್ವಯ

18/07/2021, 20:47

ಮಂಗಳೂರು(reporterkarnataka news): ಕಾಸರಗೋಡು – ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ಷರತ್ತಿನ ಮೇಲೆ ಜುಲೈ 19ರಿಂದ ಅನುಮತಿ ನೀಡಲಾಗಿದೆ.

ಪ್ರಸ್ತುತ ರಾಜ್ಯ ಸರಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಪ್ರತಿದಿನ ಸಂಚಾರ ಮಾಡುವವರ ಅನುಕೂಲಕ್ಕಾಗಿ ಈ ಅನುಮತಿ ನೀಡಲಾಗಿದೆ  ಎಂದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏನೆಲ್ಲ ಷರತ್ತು?

* ಕೆಎಸ್ಸಾರ್ಟಿಸಿ ಹಾಗೂ ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕ ಕನಿಷ್ಠ 1(ಒಂದು) ಡೋಸ್ ಪಡೆದಿರುವ ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನಗೆಟಿವ್ ವರದಿಯನ್ನು ಆಯಾ ಬಸ್ ನ

ನಿರ್ವಾಹಕರು (Bus Conductor) ಖಚಿತಪಡಿಸಕೊಳ್ಳತಕ್ಕದ್ದು,

* ಕೋವಿಡ್‌ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಫರ್, ಸಾರ್ವಜನಿಕ ಅಂತರ)

ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು