ಇತ್ತೀಚಿನ ಸುದ್ದಿ
ಮಂಗಳೂರು: ಕೊಂಕಣಿ ಭವನಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವರಿಂದ ಶಿಲಾನ್ಯಾಸ
26/02/2022, 20:27
ಮಂಗಳೂರು(reporterkarnataka.com): ನಗರದ ಉರ್ವ ಸ್ಟೋರ್ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಭವನಕ್ಕೆ ಶನಿವಾರ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಶಿಲಾನ್ಯಾಸ ನೆರವೇರಿಸಿದರು.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ. ಕೆ. ಜಗದೀಶ್ ಪೈ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕರಾದ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಮೀನುಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷ ನಿತೀನ್ ಕುಮಾರ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ್ ಕತ್ತಲ್‍ಸಾರ್, ಮಹಾನಗರ ಪಾಲಿಕೆ ಸದಸ್ಯರಾದ ಗಣೇಶ್ ಕುಲಾಲ್, ಜಯಶ್ರೀ ಹಾಗೂ ಇತರೆ ಗಣ್ಯರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.