ಇತ್ತೀಚಿನ ಸುದ್ದಿ
Mangaluru | ಕೊಂಕಣಿ ಮಾನ್ಯತಾ ದಿನಾಚರಣೆ: ಪಾಲ್ದನೆ ಚರ್ಚ್ ನಲ್ಲಿ ಕೊಂಕಣಿ ಸ್ಪರ್ಧೆಗಳು
17/08/2025, 19:16

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಆಗಸ್ಟ್ 24 ರಂದು ಕೊಂಕಣಿ ಮಾನ್ಯತಾ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಕೊಂಕಣಿ ಹಾಡುಗಳ ಮತ್ತು ಕೊಂಕಣಿ ಕವಿತೆಗಳ ಸ್ಪರ್ಧೆಯನ್ನು ಭಾನುವಾರ ಚರ್ಚಿನಲ್ಲಿ ಏರ್ಪಡಿಸಲಾಗಿತ್ತು.
ಮಕ್ಕಳಿಂದ ಹಿಡಿದು ವಯಸ್ಕರ ವರೆಗಿನ ಸ್ಪರ್ಧಿಗಳು ಭಾಗವಹಿಸಿದ್ದರು.
ಚರ್ಚಿನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಸಿಯಸ್ ಕುವೆಲ್ಲೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಅವರು ಮಾತನಾಡಿ ಕೊಂಕಣಿ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಇಂಥ ಸ್ಪರ್ಧಾ ಕಾರ್ಯಕ್ರಮಗಳು ಪೂರಕವಾಗಿವೆ. ಆದ್ದರಿಂದ ಕೊಂಕಣಿ ಭಾಷಿಗರು ಇಂತಹ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸ ಬೇಕು ಎಂದರು.
ಜೈಸನ್ ಲೋಬೊ ಮತ್ತು ಜೋಸೆಫ್ ಪಿಂಟೊ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಪ್ಯಾಟ್ಸಿ ಮೊಂತೇರೊ ಮತ್ತು ಸದಸ್ಯರು ಉಪಸ್ಥಿತರಿದ್ದರು. ರೋಶನ್ ಕ್ರಾಸ್ತಾ ಕಾರ್ಯಕ್ರಮ ನಿರ್ವಹಿಸಿದರು.