7:39 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು: ಕೊರಗಜ್ಜ ಕಟ್ಟೆಯಲ್ಲಿ ಕಾಂಡೋಮ್ ಇರಿಸಿದ ಆರೋಪಿ ಬಂಧನ; ಊಹಾಪೋಹಗಳಿಗೆ ತೆರೆ

30/12/2021, 09:55

ಮಂಗಳೂರು(reporterkarnataka.com): ನಗರದ ಅತ್ತಾವರ ಬಳಿಯ ಕೊರಗಜ್ಜ ಕಟ್ಟೆಯಲ್ಲಿ ಉಪಯೋಗಿಸಿದ ಕಾಂಡೋಮ್ ಇರಿಸಿ ಅಪವಿತ್ರಗೊಳಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಹುಬ್ಬಳ್ಳಿ ಯವನಾದ ಪ್ರಸ್ತುತ ಕೋಟೆಕಾರು ಮುಂಡಾಣ ಎಂಬಲ್ಲಿ ವಾಸವಾಗಿರುವ ದೇವದಾಸ್ ದೇಸಾಯಿ (62) ಬಂಧಿತ ಆರೋಪಿ. ಈತನ ತಂದೆ ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದು, ವಿವಿಧ ದೈವಸ್ಥಾನ, ಕೊರಗಜ್ಜ ಕಟ್ಟೆ, ಮಸೀದಿ, ಗುರುದ್ವಾರಗಳ ಕಾಣಿಕೆ ಡಬ್ಬಿಯಲ್ಲಿ ಕಾಂಡೋಮ್, ಭಿತ್ತಿಪತ್ರ, ಏಸುವಿನ ಕುರಿತಾದ ಲೇಖನ ಹಾಕಿರುವುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಮಾರ್ನಮಿಕಟ್ಟೆ ಕೊರಗಜ್ಜ ಕಟ್ಟೆ,ಬಾಬುಗುಡ್ಡೆ ಕೊರಗಜ್ಜನ ಕಾಣಿಕೆ ಡಬ್ಬಿ, ಕೊಂಡಾಣ ದೈವಸ್ಥಾನ, ಮಂಗಳಾದೇವಿ ದೇವಸ್ಥಾನ, ಕದ್ರಿ ದೇವಸ್ಥಾನದ ಬಳಿಯಲ್ಲಿರುವ ರಿಕ್ಷಾ ಪಾರ್ಕ್ ನ ಬಳಿ ಕಾಣಿಕೆ ಡಬ್ಬಿ, ಕಲ್ಲುರ್ಟಿ ದೈವಸ್ಥಾನ, ಒಮೆಗಾ ಆಸ್ಪತ್ರೆ ಬಳಿ, ಪಂಪ್ ವೆಲ್ ಬಳಿ, ಉಳ್ಳಾಲದ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ, ಕಲ್ಲಾಫು ನಾಗನ ಕಟ್ಟೆ , ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ, ಉರ್ವಾ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ, ಕುತ್ತಾರು ಕೊರಗಜ್ಜನ ಕಟ್ಟೆ, ಕುಡುಪು ದೈವಸ್ಥಾನ , ಉಳ್ಳಾಲದ ಕೊರಗಜ್ಜನ ಕಾಣಿಕೆ ಡಬ್ಬಿ, ನಂದಿಗುಡ್ಡೆಯ ಕೊರಗಜ್ಜನ ಗುಡಿ, ಎ ಬಿ ಶೆಟ್ಟಿ ವೃತ್ತದ ಬಳಿಯ ದರ್ಗಾ, ಸಿಖ್ ಗುರುದ್ವಾರ ಗುಡಿ- ಬಂಗ್ರ ಕೂಳೂರು, ಶ್ರೀ ಬಬ್ಬು ಸ್ವಾಮಿ ದೈವಸ್ಥಾನ- ಮಂಕಿಸ್ವಾಂಡ್, ಆದಿ ಮಾಹೇಶ್ವರಿ ದೈವಸ್ಥಾನ ಭಜನಾ ಮಂಡಳಿ ಕಾಣಿಕೆ ಡಬ್ಬಿ- ಜೆಪ್ಪು ಮಹಾಕಾಳಿ ಪಡ್ಪು ಮುಂತಾದ ಕಡೆ ಕೃತ್ಯ ಎಸಗಿರುವುದಾಗಿ ವಿಚಾರಣೆ ವೇಳೆ ಆರೋಪಿ ತಿಳಿಸಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು