12:30 PM Wednesday17 - December 2025
ಬ್ರೇಕಿಂಗ್ ನ್ಯೂಸ್
Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರು: ಕೆಪಿಟಿ ಸಮಸ್ಯೆ ಕುರಿತು ಚರ್ಚಿಸಲು ಹೋದ ಎಬಿವಿಪಿ ಮುಖಂಡರಿಗೆ ನಿಂದನೆ: ಪ್ರತಿಭಟನೆ

05/12/2022, 23:48

ಮಂಗಳೂರು(reporterkarnataka.com): ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್‌ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ ಕೆಪಿಟಿಯಲ್ಲಿ ನಡೆದಿದೆ.

ಪ್ರಾಂಶುಪಾಲರ ನಡೆಯಿಂದ ಕೆರಳಿದ ವಿದ್ಯಾರ್ಥಿಗಳು ಕಾಲೇಜು ಮುಂಬಾಗ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಕೆಪಿಟಿ ಪ್ರಾಂಶುಪಾಲರ ನಡೆಯಿಂದ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ಮದ್ಯಾಹ್ನದಿಂದ ವಿದ್ಯಾರ್ಥಿಗಳು ಕಾಲೇಜಿನ ಹೊರಗಡೆ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳ ಸಮಸ್ಯೆಯ ಕುರಿತಾಗಿ ಕೆಪಿಟಿ ಕಾಲೇಜಿನ ಪ್ರಾಂಶುಪಾಲರ ಬಳಿ ಚರ್ಚಿಸಲು ವಿದ್ಯಾರ್ಥಿ ಪರಿಷತ್ ನ ಪ್ರಮುಖ ಕಾರ್ಯಕರ್ತರು ತೆರಳಿದಾಗ ವಿದ್ಯಾರ್ಥಿಗಳನ್ನು ನಿಂದಿಸಿ, ಪರಿಷತ್ ನ ಕಾರ್ಯಕರ್ತರಿಗೆ ಕಾಲೇಜಿನ ವಿದ್ಯಾರ್ಥಿಗಳಿಂದ ಹೊಡೆಸುವುದಾಗಿ ಹೇಳಿದಾಗ ಕೆರಳಿದ ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರು ಕಾಲೇಜಿನ ಮುಂಬಾಗದಲ್ಲಿ ಪ್ರತಿಭಟನೆಯನ್ನು ಪ್ರಾರಂಭಿಸಿದರು.

ಮಧ್ಯಾಹ್ನದಿಂದ ನಡೆಯುತ್ತಿರುವ ಪ್ರತಿಭಟನೆಗೆ ಪ್ರಾಂಶುಪಾಲರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಎಬಿವಿಪಿ ನಾಯಕರು ಹೇಳಿದ್ದು ಪ್ರತಿಭಟನಾ ಸ್ಥಳಕ್ಕೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರು ಬೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆಗೆ ಕ್ಷಮೆಯಾಚಿಸ ಬೇಕಾಗಿ ಆಗ್ರಹಿಸಿದ್ದಾರೆ. ಪ್ರತಿಭಟನೆಯ ನೇತೃತ್ವವನ್ನು
ವಿಭಾಗ ಸಂಚಾಲಕರಾದ ಹರ್ಷಿತ್ ಕೊಯ್ಲಿ, ಜಿಲ್ಲಾ ಸಂಚಾಲಕ್ ಶ್ರೇಯಸ್ ವಿಭಾಗ ಎಸ್ ಎಫ್ ಡಿ ಪ್ರಮುಖ್ ನಿಶಾನ್ ಆಳ್ವ ಪ್ರಮುಖರಾದ ಸ್ಕಂದ ಕಿರಣ್, ಶ್ರೀಪಾದ್ ವಹಿಸಿದ್ದಾರೆ.

ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತನ್ನು ಏರ್ಪಾಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು