ಇತ್ತೀಚಿನ ಸುದ್ದಿ
ಮಂಗಳೂರು: ಕ್ಷುಲ್ಲಕ ಜಗಳ; ತಂಡದಿಂದ ವ್ಯಕ್ತಿಯ ತಲೆಗೆ ಚೂರಿ ಇರಿತ; ಗಾಯಾಳು ವೆನ್ಲಾಕ್ ಆಸ್ಪತ್ರೆಗೆ ದಾಖಲು
03/09/2021, 00:26

ಮಂಗಳೂರು(reporterkarnataka.com): ನಗರದ ಹೊರವಲಯದ ಎದುರುಪದವಿನಲ್ಲಿ ವ್ಯಕ್ತಿಯೊಬ್ಬರಿಗೆ ತಂಡವೊಂದು ಚೂರಿಯಿಂದ ಇರಿತ ಘಟನೆ ನಡೆದಿದೆ
ಕುಡಿದು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ವ್ಯಕ್ತಿಯ ತಲೆಗೆ ಚೂರಿಯಿಂದ ಇರಿಯಲಾಗಿದೆ ಎಂದು ತಿಳಿದು ಬಂದಿದೆ.
ಬಾಗಲಕೋಟೆ ಮೂಲದ ನಿಂಗಣ್ಣ ಎಂಬಾತನಿಗೆ ಚೂರಿಯಿಂದ ಇರಿಯಲಾಗಿದೆ. ಎದುರುಪದವು ತಂಡದಿಂದ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.
ಗಾಯಾಳುವನ್ನು ನಗರದ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾವೂರು ಪೊಲೀಸರು ಭೇಟಿ ಪರಿಶೀಲನೆ.