9:11 PM Saturday23 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

Mangaluru | ‘ಕುಡ್ಲದ ಪಿಲಿ ಪರ್ಬ-ಸೀಸನ್ 4’: ಆಮಂತ್ರಣ ಪತ್ರಿಕೆ ಬಿಡುಗಡೆ

23/08/2025, 21:11

ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇದೇ ಸೆ.30 ರಂದು ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆಯನ್ನು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು.
ಬಳಿಕ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧ‌ರ್ ಶೆಟ್ಟಿ ಅವರು, ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದು, ಪ್ರತಿ ವರ್ಷದಂತೆ ನಗರದ ಕೇಂದ್ರ ಮೈದಾನದಲ್ಲಿ ಈ ಬಾರಿಯ ಪಿಲಿಪರ್ಬವು ಸಂಭ್ರಮದಿಂದ ನಡೆಯಲಿದೆ. ನಮ್ಮ ಪ್ರತಿಷ್ಠಾನದ ಮೂಲ ಉದ್ದೇಶ ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಆಯೋಜನೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ರೀತಿಯ ಅನುಮತಿ ಪಡೆಯಲಾಗಿದ್ದು ಸಾರ್ವಜನಿಕರೆಲ್ಲರಿಗೂ ಸಂಭ್ರಮದ ಪಿಲಿಪರ್ಬಕ್ಕೆ ಸ್ವಾಗತ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ದಿವಾಕರ್ ಪಾಂಡೇಶ್ವರ ಪ್ರಮುಖರಾದ ನರೇಶ್ ಶೆಣೈ, ಅಶ್ವಿತ್ ಕೊಟ್ಟಾರಿ, ಲಲಿತ್ ಮೆಂಡನ್, ಕಿರಣ್ ಶೆಣೈ, ಜಗದೀಶ್ ಕದ್ರಿ, ಸಂಜಯ್ ಪೈ, ಸಹಾನ್ ಕೋಡಿಕೆರೆ, ಸತೀಶ್ ಮುಂಡಕಾಜೆ, ನರೇಶ್ ಪ್ರಭು, ಚೇತನ್ ಕಾಮತ್, ಅನಿಲ್ ಬೋಳೂರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು