8:29 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ಮಂಗಳೂರು- ಲಕ್ಷದ್ವೀಪ ನಡುವೆ ಜೆಟ್ ಸೇವೆ ಮೂಲಕ ಪ್ರವಾಸಿ ಉದ್ಯಮ: ಮುಖ್ಯಮಂತ್ರಿ ಬೊಮ್ಮಾಯಿ

16/03/2023, 17:13

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರು ಮತ್ತು ಲಕ್ಷದ್ವೀಪ
ನಡುವೆ ಜೆಟ್ ಸೇವೆ ಆರಂಭಿಸಿ ಪ್ರವಾಸಿ ಉದ್ಯಮಕ್ಕೆ ಅನುಕೂಲ ಮಾಡಿಕೊಡಲಾಗುವುದು. ಆ ಮೂಲಕ ಕರಾವಳಿ ಭಾಗವೂ ಅಭಿವೃದ್ಧಿಯಾಗಬೇಕು. ತುಳುನಾಡಿನ ಅಭಿವೃದ್ಧಿ ಯಲ್ಲಿ ರಾಜ್ಯದ ಅಭಿವೃದ್ಧಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಗುರುವಾರ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಿಸಾನ್ ಸಮ್ಮಾನ ಯೋಜನೆಯಲ್ಲಿ ರಾಜ್ಯದ 53.43 ಲಕ್ಷ ರೈತರಿಗೆ 16 ಸಾವಿರ ಕೋಟಿ ರೂಪಾಯಿ ನೇರವಾಗಿ ಖಾತೆಗೆ ಜಮೆ ಆಗಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ 1.39,571 ರೈತರಿಗೆ 500 ಕೋಟಿಗೂ ಹೆಚ್ಚು ಅನುದಾನ ಬಂದಿದೆ ಎಂದು ಮುಖ್ಯಮಂತ್ರಿ ನುಡಿದರು.
ಕರಾವಳಿಗರು ಒಳ್ಳೆಯ ಜನರು. ಜಾತಿ, ಮತ ಪಂಥವಿಲ್ಲದೆ ಸಹಬಾಳ್ಬೆಯಿಂದ ಇರುವಂತಹ ವ್ಯಕ್ತಿತ್ವ ಕರಾವಳಿ ಜಿಲ್ಲೆಯ ಜನರದು ಆಗಿದೆ ಎಂದು ಬೊಮ್ಮಾಯಿ ಶ್ಲಾಘಿಸಿದರು.
ರಾಜ್ಯ ಸರಕಾರದ ವಿದ್ಯಾನಿಧಿ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 41.859 ವಿದ್ಯಾರ್ಥಿಗಳಿಗೆ ಲಾಭ ಸಿಗುತ್ತಿದೆ. ಇಂತಹ ವಿನೂತನ ಯೋಜನೆ ಯಾವುದೇ ಸರ್ಕಾರದಲ್ಲಿ ಸಿಕ್ಕಿಲ್ಲ. ಡಬಲ್ ಎಂಜಿನ್ ಸರ್ಕಾರದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಈ ಯೋಜನೆ ಅನ್ವಯವಾಗುತ್ತಿದೆ. ಸಮಾಜದಲ್ಲಿ ಪರಿವರ್ತನೆ ತರುವುದಕ್ಕೆ ಸರ್ಕಾರವು ವಿಶೇಷ ಆಸಕ್ತಿ ವಹಿಸುತ್ತಿದೆ ಎಂದರು.

ಶಿಕ್ಷಣ, ಉದ್ಯೋಗ ನೀಡಿದಾಗ ಬಲಿಷ್ಠ ರಾಜ್ಯ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಇದಕ್ಕಾಗಿಯೇ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ದುಡಿಗೆ ಸರ್ಕಾರವು ಒತ್ತು ನೀಡುತ್ತಿದೆ. ಸಾಮಾಜಿಕ ನ್ಯಾಯ ಎಂದು ಭಾಷಣ ಮಾಡುವವರನ್ನು ನಂಬಬೇಡಿ. ನಿಮ್ಮನ್ನು ಅಲ್ಲಿಯೇ ಇಡುತ್ತಾರೆ, ನಾವು ನಮ್ಮ ಕೆಲಸದಲ್ಲಿ ನಂಬಿಕೆ ಇಟ್ಟಿದ್ದೇವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಮಾಡಿದ್ದು ನಮ್ಮ ಸರ್ಕಾರದ ಹೆಮ್ಮೆ. ಜೇನುಗೂಡ ಕೈ ಹಾಕಬೇಡಿ ಎಂದು ನನಗೆ ಭಯ ಹುಟ್ಟಿಸಿದರು. ಆದರೂ ನಾನು ಜೇನುಗೂಡಿಗೆ ಕೈ ಹಾಕಿ ಮೀಸಲಾತಿ ಹೆಚ್ಚಳ ಮಾಡಿದ್ದೇನೆ ಎಂದು ಹೇಳಿದರು.
ಕರಾವಳಿಯಲ್ಲಿ ಸಿಆರ್ ಜೆಡ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಪರಿಣಾಮ ಸಾಕಷ್ಟು ಅಭಿವೃದ್ಧಿ ನಡೆಯುತ್ತಿದೆ. 35 ವರ್ಷಗಳ ಕಾಲದ ಬೇಡಿಕೆಯನ್ನು ಸರ್ಕಾರದ ಆದೇಶ ಹೊರಡಿಸಲಾಗಿದೆ. ಮಂಗಳೂರು – ಕಾರವಾರ ಬಂದರು ಅಭಿವೃದ್ಧಿ ಮಾಡಲಾಗಿದೆ. ಪ್ಲೋಟಿಂಗ್ ಜೆಟ್ಟಿ ನಿರ್ಮಾಣ ಮಾಡಲಾಗುತ್ತಿದೆ. ಕಡಲಕೊರೆತಕ್ಕೆ ಶಾಶ್ವತ ಪರಿಹಾರಕ್ಕೆ ಬೆಟ್ಟಂಪಾಡಿಯಲ್ಲಿ ಮಾಡಲಾಗುತ್ತಿದೆ. ಮೀನುಗಾರರಿಗೆ ಸಿಮೇಎಣ್ಣೆ 8 ಸಾವಿರ ಮಂದಿಗೆ 10 ತಿಂಗಳ ಕಾಲ ನೀಡಲಾಗುತ್ತಿದೆ. ಇದಕ್ಕಾಗಿ 18 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಹಿಂದಿನ ಸರ್ಕಾರ ಇಂತಹ ಕೆಲಸಗಳನ್ನು ಮಾಡುತ್ತಿರಲಿಲ್ಲ ಎಂದರು.
ಕಾಂಗ್ರೆಸ್ಸಿನ ಗ್ಯಾರಂಟಿ ಕಾರ್ಡ್ ಗೆ ಯಾವುದೇ ಬೆಲೆಯೇ ಇಲ್ಲ. ಅದೊಂದು ವಿಸಿಟಿಂಗ್ ಕಾರ್ಡ್ ಇದ್ದ ಹಾಗೇ. ವಿಸಿಟಿಂಗ್ ಕಾರ್ಡ್ ಡಸ್ಟ್ ಬಿನ್ ಗೆ ಹೋಗುವುದು ಗ್ಯಾರಂಟಿ. ಕರಾವಳಿಯಲ್ಲಿ ಶಾಂತಿ ಕದಡುವ ಪಿಎಫ್ ಐ ಸಂಘಟನೆಯನ್ನು ನಿಷೇಧ ಮಾಡಿದ್ದೇವೆ. ನಾರಾಯಣ ಗುರುಗಳ ನಿಗಮ ಸ್ಥಾಪನೆ ಮಾಡುವ ಮೂಲಕ ಬಹಳ ವರ್ಷಗಳ ಕಾಲದ ಈ ಬೇಡಿಕೆ ಈಡೇರಿಸಿದ್ದೇವೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮಾತನಾಡಿ, ದ.ಕ. ಜಿಲ್ಲೆಯಲ್ಲಿ 21 ಲಕ್ಷ ಪಲಾನುಭವಿಗಳು ಇದ್ದಾರೆ. ಒಂದು ಜಿಲ್ಲೆಯಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಜನರಿಗೆ ಸಿಕ್ಕಿರುವುದು ಸಾಧನೆಯೇ ಸರಿ. ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಸರಳವಾಗಿ ಪರಿಹಾರ ಮಾಡಿದ ಶ್ರೇಯಸ್ಸು ನಮ್ಮ ಸರ್ಕಾರ ಸಾಧನೆ ಆಗಿದೆ. ಮಹಿಳೆಯರ ಬಗ್ಗೆ ಮಾತನಾಡುವವರು ಬಹಳಷ್ಟು ಇದ್ದಾರೆ. ಆದರೆ ಮಹಿಳೆಯರ ಪರ ಅವರ ಸಾಧನೆ ಏನು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
ಶಾಸಕ ವೇದವ್ಯಾಸ ಕಾಮತ್ ಪ್ರಾಸ್ತಾವಿಕ ಮಾತನಾಡಿ, ಸರ್ಕಾರವು ಜನರ ಅಭಿವೃದ್ಧಿಗೆ ಸಾಕಷ್ಟು ಸಹಕಾರಿ ಆಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರವು ಕರಾವಳಿ ಜಿಲ್ಲೆಯ ಅಭಿವೃದ್ಧಿ ಗೆ ಸಾಕಷ್ಟು ಕೊಡುಗೆ ನೀಡಿದೆ. ರಸ್ತೆ, ಮೀನುಗಾರಿಕೆ ಸೇರಿದಂತೆ ಹಲವು ಯೋಜನೆಗಳಿಗೆ ಸಾಕಷ್ಟು ಅನುದಾನವನ್ನು ಸರ್ಕಾರ ನೀಡಿದೆ ಎಂದರು.
ಸಚಿವರಾದ ಸೋಮಶೇಖರ , ಕೋಟ ಶ್ರೀನಿವಾಸ್ ಪೂಜಾರಿ, ಎಸ್ ಅಂಗಾರ, ಮೇಯರ್ ಜಯಾನಂದ, ಶಾಸಕರಾದ ಸಂಜೀವ್ ಮಠಂದೂರ್, ಡಾ. ವೈ. ಭರತ್ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್, ಉಮಾನಾಥ ಕೊಟ್ಯಾನ್, ಹರೀಶ್ ಪೂಂಜ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಜಿಲ್ಲಾಧಿಕಾರಿ ರವಿಕುಮಾರ್, ಜಿಪಂ
ಸಿಇಒ ಡಾ. ಕುಮಾರ್, ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಚೆನ್ನಬಸಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು