9:47 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

Mangaluru | ಕೆಲರಾಯ್ ಚರ್ಚ್ ನಲ್ಲಿ ಲಾಯಿಕೋತ್ಸವ್ 2025

22/09/2025, 10:37

ಮಂಗಳೂರು(reporterkarnataka.com): ಮಂಗಳೂರು ತಾಲೂಕಿನ ಕೆಲರಾಯ್ ಸೈಂಟ್ ಆ್ಯನ್ಸ್ ಚರ್ಚ್ ಮತ್ತು ಕ್ಯಾಥೊಲಿಕ್ ಸಭಾ ಕೆಲರಾಯ್‌ ಘಟಕದ ವತಿಯಿಂದ ಲಾಯಿಕೋತ್ಸವ್ 2025 ರವಿವಾರ ಚರ್ಚ್ ನ ಗೋಲ್ಡನ್ ಜುಬಿಲಿ ಹಾಲ್‌ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಫಾದರ್ ಮುಲ್ಲರ್ ಚಾರಿಟೆಬಲ್‌ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾ. ಫೌಸ್ತಿನ್‌ ಲೂಕಸ್ ಲೋಬೊ ಅವರು ಉದ್ಘಾಟಿಸಿದರು, ಕೆಲರಾಯ್‌ ಚರ್ಚ್‌ನ ಧರ್ಮಗುರು ವಂದನೀಯ ಫಾ. ಸಿಲ್ವೆಸ್ಟರ್ ಡಿ’ಕೋಸ್ಟಾ ಅಧ್ಯಕ್ಷತೆ ವಹಿಸಿದ್ದರು.
ಕ್ಯಾಥೊಲಿಕ್‌ ಸಭಾ ಕೇಂದ್ರೀಯ ಸಮಿತಿ ಅಧ್ಯಕ್ಷ ಸಂತೋಷ್ ಡಿ’ಸೋಜ, ಮಂಗಳೂರು ಧರ್ಮ ಪ್ರಾಂತ್ಯದ ಪಾಲನಾ ಪರಿಷತ್ತಿನ ಕಾರ್ಯದರ್ಶಿ ಜಾನ್ ಡಿ’ಸಿಲ್ವಾ, ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಯ್ ಕ್ಯಾಸ್ಟೆಲಿನೊ, ಕ್ಯಾಥೊಲಿಕ್ ಸಭಾ ಸಿಟಿ ವಲಯದ ಅಧ್ಯಕ್ಷೆ ವಿಲ್ಮಾ ಮೊಂತೆರೊ, ಐಎಫ್‌ಕೆಸಿಎ ಕರ್ನಾಟಕ ಇದರ ಸಂಚಾಲಕ ಡೆನಿಸ್ ಡಿ’ಸಿಲ್ವಾ, ಕ್ಯಾಥೊಲಿಕ್ ಸಭಾ ಮಾಜಿ ಅಧ್ಯಕ್ಷ ರೋಲ್ಫಿ ಡಿ’ಕೋಸ್ತಾ, ಕ್ಯಾಥೊಲಿಕ್ ಸಭಾ ರಾಜಕೀಯ ವಿಭಾಗದ ಸಂಚಾಲಕ ಸ್ಟ್ಯಾನಿ ಲೋಬೊ, ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ವಿಜಯಕ್ರಾಂತಿ ಅವರು ಅತಿಥಿಗಳಾಗಿ ಉಪಸ್ಥಿತರಿದ್ದರು. ಐದು ಚರ್ಚ್ ಗಳ ಪಾಲನಾ ಸಮಿತಿಗಳ ಉಪಾಧ್ಯಕ್ಷರು, ಕ್ಯಾಥೋಲಿಕ್ ಸಭಾ ಅಧ್ಯಕ್ಷರು, ಧರ್ಮಗುರುಗಳು ಮತ್ತು ವಿವಿಧ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಕೆಲರಾಯ್, ಪಾಲ್ದನೆ, ನೀರ್‌ಮಾರ್ಗ, ವಾಮಂಜೂರು ಮತ್ತು ಫೆರ್ಮಾಯ್‌ ಚರ್ಚ್ ಗಳ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಐದು ಚರ್ಚ್ ಗಳ ವ್ಯಾಪ್ತಿಯ ಸರಕಾರಿ ನೌಕರರು, ಮಾಜಿ ಸೈನಿಕರು ಮತ್ತು ಚುನಾಯಿತ ಪಂಚಾಯತ್ ಸದಸ್ಯರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಎಸಿಪಿ ವಿಜಯಕ್ರಾಂತಿ ಅವರು- ಸೈಬರ್ ಅಪರಾಧ ಮತ್ತು ಸಾಮಾಜಿಕ ಮಾಧ್ಯಮಗಳ ಕುರಿತು, ಮಾಜಿ ಸಿವಿಲ್ ನ್ಯಾಯಾಧೀಶರಾದ ವಿಜೇತಾ ಪಿಂಕಿ ಡೆ’ಸಾ ಅವರು ಆಸ್ತಿ ವಿಷಯಗಳು ಮತ್ತು ಕಾನೂನು ದಾಖಲಾತಿ ಕುರಿತು, ಗಾಡ್ವಿನ್ ಪಿಂಟೊ ಅವರು ಕೃಷಿ ಮತ್ತು ಸಣ್ಣ ಕೈಗಾರಿಕೆಗಳಿಗೆ ಸರ್ಕಾರಿ ಸೌಲಭ್ಯಗಳ ಬಗ್ಗೆ, ವಕೀಲ ಹಾಗೂ ಮಾನವ ಹಕ್ಕುಗಳ ಕಾರ್ಯಕರ್ತ ಸುಧೀರ್ ಕುಮಾರ್ ಅವರು ಸಾಂವಿಧಾನಿಕ ಹಕ್ಕುಗಳು ಮತ್ತು ಕರ್ತವ್ಯಗಳು, ಪತ್ರಕರ್ತ ವಿಲ್ಫ್ರೆಡ್ ಡಿ’ಸೋಜ ಅವರು ಪಂಚಾಯತ್ ಸಭೆಗಳಲ್ಲಿ ಭಾಗವಹಿಸುವಿಕೆಯ ಮಹತ್ವದ ಕುರಿತು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು