4:59 AM Sunday4 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

Mangaluru | ಓದುಗರಿಂದ ಸಾಹಿತ್ಯ ಉಳಿಯುತ್ತದೆ: ಡಾ. ಫಾ. ಪ್ರವೀಣ್ ಮಾರ್ಟಿಸ್

06/05/2026, 22:20

ಮಂಗಳೂರು(reporterkarnataka.com): ಸಂತ ಅಲೋಶಿಯಸ್ ವಿಶ್ವವಿದ್ಯಾಲಯ ಕೊಂಕಣಿ ಸಂಸ್ಥೆಯಲ್ಲಿ ’ವಿಂಚ್ಣಾರ್ ಮೊತಿಯಾಂ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಯಾವುದೇ ಭಾಷೆಯ ಸಾಹಿತ್ಯದ ಉಳಿವು ಓದುಗರ ಮೇಲೆ ಅವಲಂಭಿಸಿದೆ. ಕೊಂಕಣಿ ಭಾಷೆಯಲ್ಲಿ ಕ್ಷೀಣಿಸುತ್ತಿರುವ ವಾಚನ ಹವ್ಯಾಸಕ್ಕೆ ಜೀವ ತುಂಬುವ ನಿಟ್ಟಿನಲ್ಲಿ, ಹೊಸ ಮಾಧ್ಯಮದ ಮೂಲಕ ವಿಂಚ್ಣಾರ್ ಮೊತಿಯಾಂ(ಆಯ್ದ ಮುತ್ತುಗಳು) ಎಂಬ ವಿಡಿಯೊ ಸರಣಿ ಕಾರ್ಯಕ್ರಮವನ್ನು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕೊಂಕಣಿ ಸಂಸ್ಥೆ ಆರಂಭಿಸುತ್ತಿದೆ. ಕಳೆದ 46 ವರ್ಷಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಸಂವರ್ಧನೆಗಾಗಿ ದುಡಿಯುತ್ತಿರುವ ಸಂತ ಅಲೊಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕೊಂಕಣಿ ಸಂಸ್ಥೆ ಕಳೆದ ಒಂದು ವರ್ಷದಿಂದ ಬೊಲ್ಕಾಂವ್ (ಬಾಲ್ಕನಿ) ಎಂಬ ವಿನೂತನ ಕಾರ್ಯಕ್ರವನ್ನು ಆಯೋಜಿಸುತ್ತಾ ಬಂದಿದ್ದು, ಪ್ರಸ್ತುತ ವಿಂಚ್ಣಾರ್ ಮೊತಿಯಾಂ ಕಾರ್ಯಕ್ರಮದಲ್ಲಿ ಓದುಗರು ತಮಗೆ ಇಷ್ಟವಾದ ಸಾಹಿತ್ಯ ಕೃತಿಯ ಬಗ್ಗೆ ಮಾತನಾಡುತ್ತಾರೆ. ಈ ಕಾರ್ಯಕ್ರಮ ತಿಂಗಳ ಪ್ರತೀ ಮೊದಲ ಹಾಗೂ ಮೂರನೇ ಶನಿವಾರ ವಿಶ್ವವಿದ್ಯಾಲಯದ ಯೂ ಟ್ಯೂಬ್ ಚ್ಯಾನೆಲ್‌ನಲ್ಲಿ ಪ್ರಸಾರವಾಗುತ್ತದೆ ಮತ್ತು ಅಲ್ಲಿ ಅಧ್ಯಯನಕ್ಕೆ ಲಭ್ಯವಿದೆ. ಇದರಿಂದ ಕೊಂಕಣಿ ಸಾಹಿತ್ಯ ಅಧ್ಯಯನ ಮಾಡುವ ವಿದ್ಯಾರ್ಥಿ ಮತ್ತು ಬೋಧಿಸುವ ಶಿಕ್ಷಕರಿಗೂ ಪ್ರಯೋಜನವಾಗಲಿದೆ” ಎಂದು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ| ಫಾ| ಪ್ರವೀಣ್ ಮಾರ್ಟಿಸ್. ಜೆ.ಸ. ಹೇಳಿದರು.
“ಕಳೆದ 44 ವರ್ಷಗಳಿಂದ ಕೊಂಕಣಿ ಸಂಸ್ಥೆ ಅಮರ್ ಕೊಂಕಣಿ ಎಂಬ ಸಂಶೋಧನಾ ಪತ್ರಿಕೆಯನ್ನೂ ನಡೆಸಿಕೊಂಡು ಬಂದಿದ್ದು, ಡಾ| ಫಾ| ವಿಜಯ್ ಡಿ ಸೊಜಾ ಅವರ ನೇತೃತ್ವದಲ್ಲಿ ಸದ್ಯದಲ್ಲೆ ಕೊಂಕಣಿ ಭಾಷಾ ಸಂಶೊಧನಾ ಕಾರ್ಯ ಆರಂಭವಾಗಲಿದೆ” ಎಂದು ಡಾ| ಫಾ| ಮಾರ್ಟಿಸ್ ತಿಳಿಸಿದರು.
ಡಾ| ಮಾರ್ಟಿಸ್ ಕೊಂಕಣಿ ಸಾಹಿತ್ಯದ ಮೇರು ಕೃತಿಗಳನ್ನು ಓದುಗರಿಗೆ ಪರಿಚಯಿಸುವ ನಿಟ್ಟಿನಲ್ಲಿ ತಯಾರಿಸಿಸ ಕೊಂಕಣಿ ಸಂಸ್ಥೆ ತಯಾರಿಸಿದ ವಿಂಚ್ಣಾರ್ ಮೊತಿಯಾಂ (ಆಯ್ದ ಮುತ್ತುಗಳು) ವಿಡಿಯೊ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದರು.
ಸರಣಿ ಕಾರ್ಯಕ್ರಮದ ರೂವಾರಿ, ಕೊಂಕಣಿ ಸಂಸ್ಥೆಯ ಸಲಹೆಗಾರ ಡಾ| ಆಲ್ವಿನ್‌ ಡೆʼಸಾ ವಿಂಚ್ಣಾರ್ ಮೊತಿಯಾಂ ಕಾರ್ಯಕ್ರಮದ ರೂಪು- ರೇಷೆ ಮತ್ತು ವಿನ್ಯಾಸದ ಕುರಿತು ಕಿರು ಪರಿಚಯ ನೀಡಿದರು. ಈ ಕಾರ್ಯಕ್ರಮ ಸರಣಿಯಿಂದ ವಾಚನ ಹವ್ಯಾಸ ಬೆಳೆಯುವ ಭರವಸೆಯಿದೆ ಎಂದು ಆವರು ಅಭಿಪ್ರಾಯಪಟ್ಟರು. ಇದೇ ಮಾದರಿಯಲ್ಲಿ ಸಾಹಿತ್ಯ ವಿಮರ್ಶೆಯ ಸಿದ್ದಾಂತಗಳನ್ನು ಓದುಗರಿಗೆ ಸರಳವಾಗಿ ಹೇಳುವ ಸರಣಿ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದು, ಸದ್ಯದಲ್ಲೇ ಪ್ರಸಾರ ಮಾಡಲಾಗುವುದು ಎಂದು ಅವರು ಹೇಳಿದರು.
ಬೊಲ್ಕಾಂವ್ ಕಾರ್ಯಕ್ರಮದ ಸಂಚಾಲಕ ಸಾಹಿತಿ, ಪತ್ರಕರ್ತ ಎಚ್. ಎಮ್. ಪೆರ್ನಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕೊಂಕಣಿ ಸಂಸ್ಥೆಯ ಕಾರ್ಯಕ್ರಮ ಸಂಚಾಲಕ ಪಿಂಟೊ ವಾಮಂಜೂರು ವಂದಿಸಿದರು. ಕು| ವನಿತಾ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು