1:08 AM Thursday22 - January 2026
ಬ್ರೇಕಿಂಗ್ ನ್ಯೂಸ್
ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:…

ಇತ್ತೀಚಿನ ಸುದ್ದಿ

ಮಂಗಳೂರು: ಮಾದಕ ದ್ರವ್ಯ ವಿರುದ್ಧ ಮಹಾ ಸಮರ; ‘ಸೇ ನೋ ಟು ಡ್ರಗ್ಸ್ ’ ವಾಕಥಾನ್

18/10/2024, 20:54

ಮಂಗಳೂರು(reporterkarnataka.com): ವ್ಯಾಪಕವಾಗಿ ಹಬ್ಬುತ್ತಿರುವ ಮಾದಕ ದ್ರವ್ಯ ಹಾವಳಿ ತಡೆಗೆ ನಗರದ ಲೈಟ್ ಹೌಸ್ ಹಿಲ್ ನ ಸಂತ ಅಲೋಶಿಯಸ್ ಕಾಲೇಜು ಮೈದಾನದಿಂದ ನೆಹರು ಮೈದಾನದ ವರೆಗೆ ಶುಕ್ರವಾರ ‘ಸೇ ನೋ ಟು ಡ್ರಗ್ಸ್ ’ ವಾಕಥಾನ್ ನಡೆಯಿತು.
ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರಿಟೇಬಲ್ ಟ್ರಸ್ಟ್,ಸಂತ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿ, ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಕೆಥೋಲಿಕ್ ಶಿಕ್ಷಣ ಮಂಡಳಿ ಸಹಯೋಗದಲ್ಲಿ ಈ ವಾಕಥಾನ್ ಜರುಗಿತು.


ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್, ದಿನೇಶ್ ಕುಮಾರ್, ಸಂತ ಅಲೋಶಿಯಸ್ ಡೀಮ್ಡ್ ವಿಶ್ವವಿದ್ಯಾನಿಲಯದ ರೆಕ್ಟರ್ ವಂ| ಮೆಲ್ವಿನ್ ಪಿಂಟೊ, ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂ|. ಪ್ರವೀಣ್ ಲಿಯೋ ಲಸ್ರಾದೋ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಾಽಕಾರಿ ಅಜಿತ್ ಮಿನೇಜಸ್, ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಡ್ರಗ್ಸ್ ವಿರೋಧಿ ಅಭಿಯಾನದ ಸಂಯೋಜಕ ಲೂವಿ ಜೆ. ಪಿಂಟೊ, ಅಲೋಶಿಯಸ್ ಡೀಮ್ಸ ಯೂನಿವರ್ಸಿಟಿ ಡ್ರಗ್ಸ್ ತಡೆ ಸೊಸೈಟಿಯ ನೋಡೆಲ ಅಽಕಾರಿ ಡಾ| ರೋಶನ್ ಮೊಂತೆರೊ, ಧರ್ಮಪ್ರಾಂತ್ಯದ ಮಾಧ್ಯಮ ಸಂಯೋಜಕ ಎಲಿಯಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಫಾದರ್ ಮುಲ್ಲರ್‌ನ ವೈದ್ಯ ಡಾ| ಶಿವಶಂಕರ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು