8:16 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಮನೆ, ಕಚೇರಿ ಸೇರಿದಂತೆ ರಾಜ್ಯದ 55 ಕಡೆಗಳಲ್ಲಿ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ

19/07/2024, 11:52

ಬೆಂಗಳೂರು(reporterkarnataka.com):
ರಾಜ್ಯ ಲೋಕಾಯುಕ್ತರು ಶುಕ್ರವಾರ ಮುಂಜಾನೆ ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರ ನಿವಾಸ, ಕಚೇರಿ ಸೇರಿದಂತೆ ರಾಜ್ಯದ 6 ಜಿಲ್ಲೆಗಳ 55 ಕಡೆಗಳಿಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಒಂದು ವಾರದ ಅವಧಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ 2ನೇ ದೊಡ್ಡ ದಾಳಿ ಇದಾಗಿದೆ. ಒಂಬುಡ್ಸ್‌ಮನ್‌ನ ಪೊಲೀಸ್ ವಿಭಾಗದ ಸುಮಾರು 85 ಅಧಿಕಾರಿಗಳು, 12 ಸರಕಾರಿ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.
ದಾಳಿ ನಡೆದ ಅಧಿಕಾರಿಗಳಲ್ಲಿ ವಾಣಿಜ್ಯ ತೆರಿಗೆ ಜಂಟಿ ಆಯುಕ್ತ ರಮೇಶ್ ಕುಮಾರ್ ಮತ್ತು ಬೆಂಗಳೂರು ವಿಭಾಗದ ಕಾನೂನು ಮಾಪನಶಾಸ್ತ್ರದ ಉಪ ನಿಯಂತ್ರಕ ಅಥರ್ ಅಲಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ
ಸಿ ಎಲ್ ಆನಂದ್ ಸೇರಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಆನಂದ್ ಅವರ ಮನೆಗೆ ಬೆಂಗಳೂರಿನ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಮೂಲತಃ ಮಂಡ್ಯದವರಾಗಿರುವ ಆನಂದ್ ಇಂಡಿಯಾ ಆರ್ಮಿಯಲ್ಲಿ ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ರಾಜ್ಯ ಸರಕಾರ ಆನಂದ ಅವರನ್ನು ಇತ್ತೀಚೆಗೆ ವರ್ಗಾವಣೆಗೊಳಿಸಿ ಬಳಿಕ ಆದೇಶ ತಡೆಹಿಡಿದಿತ್ತು.
ಜುಲೈ 11ರಂದು ಲೋಕಾಯುಕ್ತರು 9 ಜಿಲ್ಲೆಗಳಲ್ಲಿ 11 ಅಧಿಕಾರಿಗಳ ಮೇಲೆ ದಾಳಿ ನಡೆಸಿ 45.1 ಕೋಟಿ ರೂಪಾಯಿ ಅಕ್ರಮ ಆಸ್ತಿಯನ್ನು ಪತ್ತೆ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು