3:37 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಮಂಗಳೂರು: ಎಂಸಿಸಿ ಬ್ಯಾಂಕಿನಲ್ಲಿ ಸ್ವಾತಂತ್ರ್ಯ ಸಂಭ್ರಮಾಚರಣೆ

16/08/2024, 13:11

ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕಿನಲ್ಲಿ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಮಿಲಾಗ್ರಿಸ್ ಚರ್ಚಿನ ಧರ್ಮಗುರುಗಳಾದ ವಂದನೀಯ ಬೊನವೆಂಚರ್ ನಜರೆತ್ ಅವರು ಪವಿತ್ರ ಬಲಿ ಪೂಜೆ ನೆರೆವೇರಿಸಿದರು. ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಉಪಾಧ್ಯಕ್ಷ ಜೆರಾಲ್ ಜೂಡ್ ಡಿಸಿಲ್ವಾ, ಮಹಾಪ್ರಬಂಧಕ ಸುನಿಲ್ ಮಿನೇಜಸ್ ವೇದಿಕೆಯಲ್ಲಿದ್ದರು.
ದ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ತಾರಾನಾಥ್ ಗಟ್ಟಿ, ನಮ್ಮ ದೇಶದ 78ನೇ ಸ್ವಾತಂತ್ರೋತ್ಸವದ ಸಂಭ್ರಮಾಚರಣೆಯಲ್ಲಿ ಪ್ರಮುಖ ಸಹಕಾರಿ ಬ್ಯಾಂಕ್, ಎಂಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಮತ್ತು ಸಿಬ್ಬಂದಿಯೊಂದಿಗೆ ಭಾಗವಹಿಸಲು ಸಂತೋಷವಾಗುತ್ತಿದೆ. ಎಂಸಿಸಿ ಬ್ಯಾಂಕ್ ನೆಲೆ ನಿಂತಿರುವ ‘ಬಾವುಟಗಡ್ಡೆ’ ಪ್ರದೇಶ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪ್ರದೇಶವಾಗಿದ್ದು, ಇಲ್ಲಿನ ಅನೇಕ ಮಹನೀಯರು ತಮ್ಮ ತ್ಯಾಗ ಮತ್ತು ಬಲಿದಾನದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ ಎಂದು ವಿವರಿಸಿದರು. ಭಾರತದ ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬ ನಾಗರಿಕನೂ ಎತ್ತಿ ಹಿಡಿಯಬೇಕಾಗಿದೆ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಸಿಬ್ಬಂದಿಯವರು ದೇಶಭಕ್ತಿ ಗೀತೆಗಳನ್ನು ಹಾಡಿ ಸಭಿಕರಲ್ಲಿ ದೇಶಪ್ರೇಮವನ್ನು ಜಾಗೃತಗೊಳಿಸಿದರು.
ಬ್ಯಾಂಕಿನ ಭದ್ರತಾ ಸಿಬ್ಬಂದಿಯಾಗಿ ಸುಮಾರು ಎರಡು ವರ್ಷ ಸೇವೆ ಸಲ್ಲಿಸಿ ಆಕಾಲಿಕವಾಗಿ ನಿಧನರಾದ ದಿವಂಗತ ಗೋಪಾಲಕೃಷ್ಣ ಗಟ್ಟಿ ಅವರಿಗೆ ಶ್ರದ್ದಾಂಜಲಿಯನ್ನು ಸಮರ್ಪಿಸಲಾಯಿತು. ಬ್ಯಾಂಕಿನ ವತಿಯಿಂದ ರೂ.25,೦೦೦/- ಆರ್ಥಿಕ ನೆರವನ್ನು ಅವರ ಕುಟುಂಬಸ್ಥರಿಗೆ ನೀಡಲಾಯಿತು.

ನಿರ್ದೇಶಕರಾದ ಡಾ. ಜೆರಾಲ್ಡ್ ಪಿಂಟೊ, ಆ್ಯಂಡ್ರು ಡಿಸೋಜ, ಅನಿಲ್ ಪತ್ರಾವೊ, ಎಲ್‌ರೊಯ್ ಕಿರಣ್ ಕ್ರಾಸ್ಟೊ, ರೋಶನ್ ಡಿಸೋಜ, ಐರಿನ್ ರೆಬೆಲ್ಲೊ, ಡೇವಿಡ್ ಡಿಸೋಜ, ಜೆ.ಪಿ. ರೊಡ್ರಿಗಸ್, ಸುಶಾಂತ್ ಸಿ. ಎ. ಸಲ್ಡಾನ್ಹಾ ಮತ್ತು ಕ್ಲೆಮೆಂಟ್ ಜಿ. ಪಿಂಟೊ, ಆಲ್ವಿನ್ ಪ್ರಶಾಂತ್ ಮೊಂತೇರೊ, ಫೆಲಿಕ್ಸ್ ಡಿಕ್ರೂಜ್, ಹೆರಾಲ್ಡ್ ಮೊಂತೇರೊ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಉಪ ಮಹಾಪ್ರಬಂಧಕ ರಾಜ್ ಎಫ್ ಮಿನೇಜಸ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಹಾಜರಿದ್ದರು.
ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾದ ಡೆರಿಲ್ ಲಸ್ರಾದೊ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು