7:45 PM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ…

ಇತ್ತೀಚಿನ ಸುದ್ದಿ

ಮಂಗಳೂರು: ಮಳೆ ಹಾನಿ ಪ್ರದೇಶಗಳಿಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ; ಪರಿಶೀಲನೆ

27/06/2025, 21:48

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.


30ನೇ ವಾರ್ಡ್ ಕೊಡಿಯಾಲ್ ಬೈಲ್ ಪೂರ್ವ ರಸ್ತೆ, ಬಲ್ಲಾಳ್ ಬಾಗ್ ಬ್ರಿಡ್ಜ್, ವೆಟ್ ವೆಲ್ ಇರುವ ಪ್ರದೇಶ, ಮೊದಲಾದ ಸ್ಥಳಗಳಿಗೆ ಭೇಟಿ ನೀಡಿದ ಶಾಸಕರು, ಅಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ ಪರಿಹಾರ ಕ್ರಮ ಇತ್ಯಾದಿ ವಿಷಯಗಳ ಬಗ್ಗೆ ಸ್ಥಳೀಯರ ಅಭಿಪ್ರಾಯದ ಮೇರೆಗೆ ಕೂಡಲೇ ಕ್ರಮಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು 75 ಕೋಟಿ ವಿಶೇಷ ಅನುದಾನದಲ್ಲಿ ಕ್ಷೇತ್ರದ ಹಲವು ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣ ಮಾಡಿದ್ದು ಬಿಟ್ಟರೆ, ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಇಲ್ಲಿನ ಸಣ್ಣಪುಟ್ಟ ತುರ್ತುಕ್ರಮಕ್ಕೂ ಬಿಡಿಗಾಸು ದೊರೆಯುತ್ತಿಲ್ಲ. ಇದರಿಂದಾಗಿ ವಿಶೇಷವಾಗಿ ಮಳೆಗಾಲದ ಸಮಯದಲ್ಲಿ ಸ್ಥಳೀಯ ಜನತೆ ತೀವ್ರ ತೊಂದರೆ ಅನುಭವಿಸುತ್ತಿದ್ದು ಈ ಎಲ್ಲದರ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಪ್ರಸ್ತಾಪಿಸಿ ಶಾಶ್ವತ ಪರಿಹಾರಕ್ಕೆ ಸರ್ಕಾರದ ಮೇಲೆ ಒತ್ತಡ ಹೇರುತ್ತೇನೆಂದು ಶಾಸಕರು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪ್ರಮುಖರಾದ ವಿವೇಕ್, ಪ್ರಶಾಂತ್ ಆಳ್ವ, ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ವಾರ್ಡ್ 29 ರಲ್ಲಿ ಉಂಟಾಗಿದ್ದ ಪ್ರವಾಹ ಪೀಡಿತ ಪ್ರದೇಶಕ್ಕೂ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಪತ್ತುಮುಡಿ ಜನತಾ ಡಿಲಕ್ಸ್ ಬಳಿ ಉಂಟಾಗಿದ್ದ ನೆರೆಗೆ ಕಾರಣ, ಮುಂದೆ ಈ ಭಾಗದಲ್ಲಿ ಅಂತಹ ಪರಿಸ್ಥಿತಿ ಮರುಕಳಿಸದಂತೆ ಅಗತ್ಯ ಕ್ರಮ ಮೊದಲಾದ ವಿಷಯಗಳ ಬಗ್ಗೆ ಸ್ಥಳೀಯರೊಂದಿಗೆ ಚರ್ಚಿಸಿ, ಮುಖ್ಯವಾಗಿ ರಾಜಕಾಲುವೆಗಳಿಗೆ ತಡೆಗೋಡೆ ಹಾಗೂ ಈಗಾಗಲೇ ಇರುವ ತಡೆಗೋಡೆಗಳ ಎತ್ತರ ಹೆಚ್ಚಿಸುವ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಪಾಲಿಕೆ ಸದಸ್ಯೆ ಲೀಲಾವತಿ ಪ್ರಕಾಶ್, ಬಿಜೆಪಿ ಪ್ರಮುಖರಾದ ಜಯರಾಜ್ ಕೊಟ್ಟಾರಿ, ರಿತೇಶ್ ಬಲ್ಲಾಲ್‌ಬಾಗ್, ಪ್ರಸಾದ್ ಆಚಾರಿ, ನಾರಾಯಣ ಭಂಡಾರಿ, ವೆಂಕಟೇಶ್, ನಟರಾಜ್, ರಜನಿ ಶೆಟ್ಟಿ, ವಿಠ್ಠಲ್, ಪ್ರಕಾಶ್ ಕೊಡಿಯಾಲ್‌ಬೈಲ್ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು