10:25 AM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮಂಗಳೂರು ಎಂಎಸ್ ಪಿಟಿಸಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸಲು ಸೂಚನೆ

13/07/2024, 23:49

ಮಂಗಳೂರು(reporterkarnataka.com): ನಗರದ ಹೊರವಲಯದ ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್‌ಪಿಸಿ) ಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಕೇಂದ್ರದ ಉದ್ಯೋಗನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ತಯಾರಿಕೆಯ ಬಗ್ಗೆ ಮಾಹಿತಿ ಪಡೆದರು.
ಪುಷ್ಟಿ ನ್ಯೂಟ್ರಿಮಿಕ್ಸ್, ಹಾಲಿನ ಪುಡಿ ಮತ್ತಿತರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರಲ್ಲದೇ, ಉತ್ಪಾದನಾ ಆಹಾರ ಸಾಮಗ್ರಿಗಳ ಬಗ್ಗೆ ಸ್ಥಳದಲ್ಲೇ ಇದ್ದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಯಿಂದ ಮಾಹಿತಿ ಪಡೆದರು. ಆಹಾರ ಸಮಗ್ರಗಳ ಪ್ಯಾಕ್ ಮಾಡುವ ತೂಕವನ್ನು ಕೂಡ ಗಮನಿಸಿದರು.
ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಎಲ್ಲ ಆಹಾರ ಸಾಮಗ್ರಿಗಳಲ್ಲಿ, ಅದರಲ್ಲೂ ಉತ್ಪಾದನೆಯಲ್ಲೂ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಆಹಾರ ಸಾಮಗ್ರಿಗಳು ಕಳಪೆ ಇದ್ದಲ್ಲಿ ಅಥವಾ ಯಾವುದೇ ಲೋಪದೋಷ ಇದ್ದಲ್ಲಿ ಕೂಡಲೇ ಸಂಬಂಧಪಟ್ಟವರ ಗಮನಕ್ಕೆ ತರಬೇಕು. ಇಲ್ಲವಾದರೆ ನೇರವಾಗಿ ತಮಗೆ ಪತ್ರ ಬರೆಯಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಚಿಸಿದರು.


ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್, ಜಿಲ್ಲಾ ನಿರೂಪಣಾ ಅಧಿಕಾರಿ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ, ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರದ ನಿರ್ವಹಣಾ ಅಧಿಕಾರಿ ಶೈಲಾ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು