10:42 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

Mangaluru | ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ನಾರಾಯಣ ಕುಂಪಲ, ಪತ್ರಕರ್ತ ಅಭಿಷೇಕ್ ಎಚ್.ಎಸ್. ಸೇರಿದಂತೆ 11 ಮಂದಿಗೆ ಸನ್ಮಾನ

28/06/2026, 21:45

ಮಂಗಳೂರು(reporterkarnataka.com): ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ನಾರಾಯಣ ಕುಂಪಲ, ಪತ್ರಕರ್ತ ಅಭಿಷೇಕ್ ಎಚ್.ಎಸ್. ಸೇರಿದಂತೆ 11 ಮಂದಿಯನ್ನು ಸನ್ಮಾನಿಸಲಾಯಿತು.
10 ಮತ್ತು ಅದಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದ ಜಿಲ್ಲೆಯ 11 ಮಂದಿ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ರಕ್ತದಾನ ಶಿಬಿರಗಳನ್ನು ಆಯೋಜಿಸಿದ ಜಿಲ್ಲೆಯ 13 ಸಂಸ್ಥೆಗಳ ಪ್ರತಿನಿಧಿಗಳನ್ನು ಇದೇ ಸಂದರ್ಭ ಗೌರವಿಸಲಾಯಿತು.

*ರಕ್ತದಾನಿಗಳಿಗೆ ಸನ್ಮಾನ:*
ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ನಾರಾಯಣ ಕುಂಪಲ (53 ಬಾರಿ), ದೇವಿಪ್ರಸಾದ್ ರಾವ್ ಎ.ಕೊಟ್ಟಾರ(46), ಮಹಮ್ಮದ್ ಮುಸ್ತಾಫ ಬೊಳಂತೂರು (36), ಎ.ನಿರಂಜನ್, ಕೆಎಸ್‌ಆರ್‌ಪಿ, ಕೊಣಾಜೆ (32), ಫ್ಲಾನ್ಸಿ ಸುವಾರಿಸ್ ಪುತ್ತೂರು(27), ಗಣೇಶ್ ನಾಯಕ್ ಡೊಂಗರಕೇರಿ (25), ಅಭಿಷೇಕ್ ಎಚ್.ಎಸ್. (20), ಮಹಮ್ಮದ್ ಅನ್ಸಾರ್ ಬೊಳಂತೂರು (19), ರಾನ್ಸನ್ ಸ್ಟೀಫನ್ ಕ್ರಾಸ್ತಾ ವಾಮದಪದವು (18), ಅಬ್ದುಲ್ ಮಲಿಕ್ ಕೆ.ಎಚ್.(11) ಮತ್ತು ಸುಧೀರ್ ರಂಜನ್ ಕೆ. (10 ಬಾರಿ) ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ‘ರಕ್ತಕ್ಕೆ ಯಾವುದೇ ಜಾತಿ, ಧರ್ಮದ ಭೇದವಿಲ್ಲ. ರಕ್ತದಾನ ಮಾನವೀಯತೆಯ ಅತ್ಯುನ್ನತ ಸಂಕೇತವಾಗಿದೆ. ಯುವ ಪೀಳಿಗೆ ರಕ್ತದಾನವನ್ನು ಜೀವನದ ಒಂದು ಮುಖ್ಯ ಸಂಕಲ್ಪವಾಗಿ ಮಾಡಿಕೊಂಡರೆ ಅಮೂಲ್ಯ ಜೀವಗಳನ್ನು ಉಳಿಸಬಹುದು’ ಎಂದರು.
ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಶಿವಪ್ರಕಾಶ್ ಡಿ.ಎಸ್., ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ.ಆರ್. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಖಜಾಂಜಿ ಗುರುದತ್ ಎಂ. ನಾಯಕ್, ನಿರ್ದೇಶಕ ರಾಘವೇಂದ್ರ ರಾವ್, ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಡಾ.ಸುಕೇಶ್ ಉಪಸ್ಥಿತರಿದ್ದರು.
ರೆಡ್‌ಕ್ರಾಸ್ ಸೊಸೈಟಿಯ ರಕ್ತದಾನ ಉಪ ಸಮಿತಿ ನಿರ್ದೇಶಕ ಪುಷ್ಪರಾಜ್ ಜೈನ್ ಸ್ವಾಗತಿಸಿ, ನಿರ್ದೇಶಕ ಪಿ.ಬಿ.ಹರೀಶ್ ರೈ ವಂದಿಸಿದರು. ನಿಧಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು