ಇತ್ತೀಚಿನ ಸುದ್ದಿ
ಮಂಗಳೂರು: ರಾಷ್ಟ್ರಮಟ್ಟದ ವಸ್ತು ಪ್ರದರ್ಶನ ‘ಸರಸ್ ಮೇಳ 2026’ ನಾಳೆ ಉದ್ಘಾಟನೆ
19/02/2026, 20:05
ಮಂಗಳೂರು(reporterkarnataka.com): ಸ್ವಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬೃಹತ್ ಮತ್ತು ಪ್ರದರ್ಶನ ಮತ್ತು ಮಾರಾಟ ಮೇಳ ಸರಸ್ ಮೇಳ 2026 ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಾಳೆ ಚಾಲನೆ ದೊರೆಯಲಿದೆ.
ದೇಶದ 15ಕ್ಕೂ ಅಧಿಕ ರಾಜ್ಯಗಳ ಸ್ವಸಹಾಯ ಗುಂಪಿನ ಮಹಿಳೆಯರು ತಮ್ಮ ಜಿಲ್ಲೆಯ ಪ್ರಮುಖ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಸಲಿದ್ದಾರೆ. ಇದಕ್ಕಾಗಿ ಕರಾವಳಿ ಉತ್ಸವ ಮೈದಾನದಲ್ಲಿ 120 ಮಳಿಗೆಗಳನ್ನು ತೆರೆಯಲಾಗಿದೆ.
ಇದರೊಂದಿಗೆ ವೈವಿಧ್ಯಮಯ ಆಹಾರ ಫುಡ್ಕೋರ್ಟ್ಗಳು, ಸಂಜೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಫೆಬ್ರವರಿ 20ರಿಂದ 28 ರವರೆಗೆ ವಸ್ತು ಪ್ರದರ್ಶನ ನಡೆಯಲಿದೆ.













