3:15 AM Monday9 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸಮಗ್ರ ಮೂಲ ಸೌಕರ್ಯ; ಮಂಗಳೂರು ಮಹಾನಗರ ಪಾಲಿಕೆಗೆ 165 ಕೋಟಿ ಅನುದಾನ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

27/01/2025, 00:06

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಮಗ್ರ ಮೂಲ ಸೌಕರ್ಯ ಕಲ್ಪಿಸುವ ಉದ್ದೇಶದಿಂದ 2024-25ನೇ ಸಾಲಿನಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಲ್ಲಿ ಒಟ್ಟು 165 ಕೋಟಿ ರೂ. ಅನುದಾನವನ್ನು ಮಂಗಳೂರು ಮಹಾನಗರ ಪಾಲಿಕೆಗೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.


ನಗರದ ನೆಹರೂ ಮೈದಾನದಲ್ಲಿ ಭಾನುವಾರ ದ.ಕ. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಅವರು ಸಂದೇಶ ನೀಡಿದರು.
ಈ ಯೋಜನೆಯಲ್ಲಿ ಒಟ್ಟು 25 ಕಾಮಗಾರಿಗಳನ್ನು ಪ್ರಸ್ತಾವಿಸಲಾಗಿದ್ದು, ಕಾಮಗಾರಿಗಳ ಅಂದಾಜು ಪಟ್ಟಿ ತಯಾರಿಕೆ ಹಂತದಲ್ಲಿದೆ. ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.


ಮಂಗಳೂರು ಹಳೆ ಬಂದರು ವ್ಯಾಪ್ತಿಯಲ್ಲಿ 11 ತೇಲುವ ಜೆಟ್ಟಿ ಕಾಮಗಾರಿಗಳು ಮಂಜೂರಾಗಿವೆ. ಉಳ್ಳಾಲ ಕೋಡಿಯಲ್ಲಿ ನಾಡದೋಣಿಗಳು ತಂಗುವ ಜೆಟ್ಟಿ ನಿರ್ಮಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಮಂಗಳೂರು ಮೀನುಗಾರಿಕಾ ಬಂದರಿನ 3ನೇ ಹಂತದ ಕಾಮಗಾರಿಗೆ ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದರು.
ಈಗಾಗಲೇ ಅಸ್ತಿತ್ವದಲ್ಲಿರುವ ಜೀವ- ಸಾರ್ಥಕತೆ ಅಂಗಕಸಿ ಯೋಜನೆ ವಿಸ್ತರಣೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ರಾಜ್ಯದ ಆದ್ಯತಾ ಕಾರ್ಡ್‌ ಹೊಂದಿರುವವರಿಗೆ ಈ ಯೋಜನೆಯಡಿ ಹೃದಯ, ಶ್ವಾಸಕೋಶ ಮತ್ತು ಮೂಳೆ ಮಜ್ಜೆಯ ಕಸಿಯ ಸೌಲಭ್ಯ ವಿಸ್ತರಿಸಲು 30 ಕೋಟಿ ರು. ಒದಗಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ 15, 18 ಮತ್ತು 21 ಲಕ್ಷ ರು.ಗಳ ಮೂರು ಪ್ಯಾಕೇಜ್‌ಗಳಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಹೇಳಿದರು.


ಹಲವು ವರ್ಷಗಳ ಬಳಿಕ ನಡೆದ ಕರಾವಳಿ ಉತ್ಸವದಲ್ಲಿ ನಿರೀಕ್ಷೆ ಮೀರಿ ಜನರು, ಪ್ರವಾಸಿಗರು ಭಾಗವಹಿಸಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ, ವಸ್ತುಪ್ರದರ್ಶನ, ಯುವ ಉತ್ಸವ, ಶ್ವಾನ ಪ್ರದರ್ಶನ, ಕಲಾ ಪರ್ಬ, ಕಾರು ಮತ್ತು ಬೈಕ್‌ಗಳ ಪ್ರದರ್ಶನ, ಬೀಚ್‌ ಉತ್ಸವ, ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಇತ್ಯಾದಿ ಕಾರ್ಯಕ್ರಮಗಳು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದೆ. ಈ ಎಲ್ಲ ಕಾರ್ಯಕ್ರಮಗಳನ್ನು ನಿರಂತರವಾಗಿ ಮುಂದುವರಿಸಲು ವಾರ್ಷಿಕ ಉತ್ಸವವಾಗಿ ನಿಗದಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ದಿನೇಶ್‌ ಗುಂಡೂರಾವ್‌ ತಿಳಿಸಿದರು.



*ಕ್ರೀಡೆಗೆ ಪ್ರೋತ್ಸಾಹ:*
ಮಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಒಳಾಂಗಣ ಕ್ರೀಡಾಂಗಣವನ್ನು ಶೀಘ್ರ ಕ್ರೀಡಾಪಟುಗಳ ಬಳಕೆಗೆ ಸಮರ್ಪಿಸಲಾಗುವುದು. ನೆಹರೂ ಮೈದಾನದ ಫುಟ್‌ಬಾಲ್‌ ಮೈದಾನದಲ್ಲಿ ಉನ್ನತ ಸೌಲಭ್ಯಗಳನ್ನು ಒದಗಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ಮಂಗಳೂರು, ಬಂಟ್ವಾಳ ಮತ್ತು ಬೆಳ್ತಂಗಡಿಯಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ವಿದ್ಯಾರ್ಥಿ ನಿಲಯ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ 4 ಹೊಸ ಹಾಸ್ಟೆಲ್‌ಗಳನ್ನು ಆರಂಭಿಸಲಾಗಿದ್ದು, ಇದರಲ್ಲಿ 400 ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ. ಹಾಸ್ಟೆಲ್‌ ಸೀಟ್‌ ದೊರಕದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಪ್ರತಿ ತಿಂಗಳು ತಲಾ 1500 ರೂ. ನಂತೆ 10 ತಿಂಗಳಿಗೆ 15 ಸಾವಿರ ರೂ. ಒದಗಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸೈನಿಕ ತರಬೇತಿ ಶಾಲೆ ನಡೆಯುತ್ತಿದ್ದು, ಪ್ರತಿವರ್ಷ 200 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ವಿವಿಧ ಸೇನಾ ಹುದ್ದೆಗಳಿಗೆ ಹಲವರು ಆಯ್ಕೆಯಾಗಿದ್ದಾರೆ ಎಂದು ವಿವರಿಸಿದರು.
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಸಂಸದ ಕ್ಯಾ. ಬ್ರಿಜೇಶ್‌ ಚೌಟ, ವಿಧಾನ ಪರಿಷತ್‌ ಸದಸ್ಯರಾದ ಐವನ್‌ ಡಿಸೋಜ, ಮಂಜುನಾಥ ಭಂಡಾರಿ, ಮೇಯರ್‌ ಮನೋಜ್‌ ಕುಮಾರ್‌, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್‌ ಗಟ್ಟಿ, ಕೊಕಂಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟಾನ್ಲಿ ಅಲ್ವಾರಿಸ್‌, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್‌ ಯು.ಎಚ್‌., ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್‌, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಪೊಲೀಸ್‌ ಆಯುಕ್ತ ಅನುಪಮ್‌ ಅಗ್ರವಾಲ್‌, ಜಿಪಂ ಸಿಇಒ ಡಾ. ಆನಂದ್‌ ಕೆ., ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌., ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಂತೋಷ್‌, ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್‌ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು