12:47 PM Thursday31 - July 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ… USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ…

ಇತ್ತೀಚಿನ ಸುದ್ದಿ

ಮಂಗಳೂರು: ನ.15ರಂದು ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶ; ಸಚಿವರಾದ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಭಾಗಿ

11/11/2023, 19:52

ಮಂಗಳೂರು(reporterkarnataka.com): ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ, ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆ ದ.ಕ. ಇವುಗಳ ಸಂಯುಕ್ತ ಆಶ್ರಯದಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶ ನ.15ರಂದು ಬೆಳಗ್ಗೆ 10:30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ದ.ಕ. ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅವರು ಈ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸಲಿರುವರು ಎಂದು ಮಾಹಿತಿ ನೀಡಿದರು.
ಗ್ರಾಪಂ, ತಾಪಂ ಮತ್ತು ಜಿಪಂ ತ್ರಿಸ್ತರದ ವ್ಯವಸ್ಥೆಯಾಗಿರುವ ಪಂಚಾಯತ್‌ರಾಜ್ ವ್ಯವಸ್ಥೆಯಲ್ಲಿನ ಕುಂದು ಕೊರತೆಗಳನ್ನು ಸರಕಾರದ ಗಮನ ಸೆಳೆಯುವ ಉದ್ದೇಶದಿಂದ ಮತ್ತು ಮಾಜಿ ಪ್ರಧಾನಿ ರಾಜೀವ ಗಾಂಧಿ ಅವರು ಪಂಚಾಯತ್‌ರಾಜ್ ವ್ಯವಸ್ಥೆಗೆ ಕಾನೂನು ರೂಪಿಸಿ 30 ವರ್ಷ ತುಂಬಿದ ಸವಿನೆನಪಿನಲ್ಲಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸ್ಥಳೀಯ ಸಂಸ್ಥೆಗಳಿಗೆ ಬಲಕೊಡುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ.ರಾಜೀವ್ ಗಾಂಧಿ ಅವರು ಪಂಚಾಯತ್ ರಾಜ್ ವ್ಯವಸ್ಥೆಗೆ ತಿದ್ದುಪಡಿ ತಂದು ಸಾಮಾಜಿಕ ನ್ಯಾಯ ಒದಗಿಸುವ ಕೊಡುವ ಮತ್ತು ಸ್ಥಳೀಯ ಸಂಸ್ಥೆಗೆ ಶಕ್ತಿ ನೀಡಿದರು. ಬಳಿಕ ಕೇಂದ್ರದಲ್ಲಿದ್ದ ಯುಪಿಎ ಸರಕಾರ ಆರ್ಥಿಕ ಬಲ ನೀಡುವ ಉದ್ಯೋಗ ಖಾತರಿ ಯೋಜನೆಯನ್ನು ಜಾರಿಗೆ ತಂದಿತು. ರಾಜ್ಯದಲ್ಲಿ ಎಸ್‌.ಎಂ. ಕೃಷ್ಣ , ಸಿದ್ದರಾಮಯ್ಯ ನೇತೃತ್ವದ ಸರಕಾರ ಪಂಚಾಯತ್ ವ್ಯವಸ್ಥೆಗೆ ಆರ್ಥಿಕ ಬಲವನ್ನು ನೀಡಿತ್ತು ಎಂದರು.


ಸಮಾವೇಶದಲ್ಲಿ ವಿಧಾನ ಪರಿಷತ್‌ನ ಮಾಜಿ ಸಭಾಪತಿ ವಿ.ಸುದರ್ಶನ ಅವರು ಪಂಚಾಯತ್ ರಾಜ್ ಅಧಿನಿಯಮದ ಬಗ್ಗೆ ಮಾತನಾಡಲಿದ್ದಾರೆ. ಜಿಲ್ಲೆಯ 6 ವಿಧಾನ ಸಭಾ ಕ್ಷೇತ್ರಗಳ ತಲಾ ಒಬ್ಬ ಗ್ರಾಮ ಪಂಚಾಯತ್ ಪ್ರತಿನಿಧಿ , ತಾಪಂನ ಓರ್ವ ಮಾಜಿ ಅಧ್ಯಕ್ಷ ಮತ್ತು ಜಿಪಂನ ಓರ್ವ ಮಾಜಿ ಅಧ್ಯಕ್ಷ ಪಂಚಾಯತ್ ರಾಜ್ ಬಗ್ಗೆ ವಿಚಾರ ಮಂಡಿಸಲಿದ್ದಾರೆ ಎಂದು ಸುಭಾಶ್ಚಂದ್ರ ಶೆಟ್ಟಿ ಮಾಹಿತಿ ನೀಡಿದರು.
ವಿಧಾನ ಪರಿಷತ್ ಸದಸ್ಯ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಆರ್‌ಜಿಪಿಆರ್‌ಎಸ್‌ನ ಸಂಚಾಲಕ ವಿಜಯ್ ಸಿಂಗ್ ಮತ್ತು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಾಜಿ ಶಾಸಕ ಬಿ. ರಮಾನಾಥ ಅವರು ಸಚಿವರುಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ ಎಂದು ಸುಭಾಶ್ಚಂದ್ರ ಶೆಟ್ಟಿ ವಿವರಿಸಿದರು.
ಸುದ್ದಿ ಗೋಷ್ಠಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್,ಮನಪಾ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ ಅಬ್ದುಲ್ ಸಲೀಂ, ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕದ ಅಧ್ಯಕ್ಷರಾದ ವಿಶ್ವಾಸ್
ಕುಮಾರ್ ದಾಸ್, ಬಿ ಎಂ. ಅಬ್ಬಾಸ್ ಅಲಿ,ಲಾರೆನ್ಸ್ ಡಿ ಸೋಜ, ವೃಂದ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಹೈದರ್ ಕೈರಂಗಳ, ಜಗದೀಶ್ ಕೊಯಿಲ, ಶುಭೋದಯ ಆಳ್ವ, ಗಿರೀಶ್ ಶೆಟ್ಟಿ, ಗಣೇಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು