ಇತ್ತೀಚಿನ ಸುದ್ದಿ
ಮಂಗಳೂರು: ಓನೆಕ್ಸ್ ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ; ಧ್ವನಿವರ್ಧಕ ವಶ
24/10/2021, 10:11
ಮಂಗಳೂರು(reporterkarnataka.com): ನಗರದ ಎಂ.ಜಿ. ರಸ್ತೆಯಲ್ಲಿರುವ ಓನೆಕ್ಸ್ ಪಬ್ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರು ಹಾಗೂ ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ತೆರೆದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ಪಬ್‌ನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ತೆರೆಯಲಾಗುತ್ತಿತ್ತು. ಜೋರಾಗಿ ಮ್ಯೂಸಿಕ್ ಬಳಸಿ ಅಕ್ಕಪಕ್ಕದ ರಸ್ತೆವರೆಗೂ ಕಿರಿಕಿರಿ ಉಂಟು ಮಾಡಲಾಗುತ್ತಿತ್ತು. ಪಬ್‌ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುವುದರಿಂದ ಅಕ್ಕಪಕ್ಕದ ನಿವಾಸಿಗಳಿಗೆ, ಸುತ್ತಾಮುತ್ತಾ ಓಡಾಡುವ ವಿದ್ಯಾರ್ಥಿಗಳಿಗೆ ಮತ್ತು ಸಮೀಪದಲ್ಲೇ ಇರುವ ದೇವಸ್ಥಾನಗಳಿಗೆ ಭಕ್ತರು ಹೋಗಿ ಬರುವುದಕ್ಕೆ ತೊಂದರೆಯಾಗುತ್ತಿದೆ ಎಂಬಿತ್ಯಾದಿ ದೂರಿನ ಆಧಾರದ ಮೇಲೆ ದಾಳಿ ನಡೆಸಲಾಗಿತ್ತು.
ಸಿಸಿಬಿ ದಾಳಿ ವೇಳೆ ಧ್ವನಿವರ್ಧಕಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.