10:28 AM Saturday6 - September 2025
ಬ್ರೇಕಿಂಗ್ ನ್ಯೂಸ್
ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ…

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಚರ್ಚ್: ಮೊಂತಿ ಫೆಸ್ತ್‌ ಪ್ರಯುಕ್ತ ಸ್ವಚ್ಛತಾ ಕಾರ್ಯ

06/09/2025, 10:22

ಮಂಗಳೂರು(reporterkarnataka.com): ಕ್ಯಾಥೊಲಿಕ್‌ ಕ್ರೈಸ್ತರು ಸಪ್ಟೆಂಬರ್‌ 8 ರಂದು ‘ಮೊಂತಿ ಫೆಸ್ತ್’ ಆಚರಿಸುತ್ತಿದ್ದು, ಈ ಬಗ್ಗೆ ಸಿದ್ಧತೆಗಳು ನಡೆಯುತ್ತಿವೆ.
ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಮೊಂತಿ ಫೆಸ್ತ್ ಆಚರಣೆಗೆ ಪೂರ್ವ ಸಿದ್ಧತೆಯಾಗಿ ಚರ್ಚ್‌ ಹಾಗೂ ಚರ್ಚ್ ವಠಾರವನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯಿತು. ಚರ್ಚ್‌ ನ ಸದಸ್ಯರು ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್‌ ಕುವೆಲ್ಲೊ ಅವರ ಮಾರ್ಗದರ್ಶನದಲ್ಲಿ ಶ್ರಮದಾನದ ಮೂಲಕ ಈ ಕಾರ್ಯವನ್ನು ನೆರವೇರಿಸಿದರು.
ಚರ್ಚ್ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್, ಸರ್ವ ಆಯೋಗಳ ಸಂಚಾಲಕ ಜೊಸ್ಲಿನ್‌ ಲೋಬೊ, ವಾರ್ಡ್‌ ಗಳ ಮುಖ್ಯಸ್ಥರಾದ ರೋಶನ್‌ ಮೊಂತೇರೊ, ವಿಲಿಯಂ ಫೆರ್ನಾಂಡಿಸ್, ಶೀಲಾ ಡಿ’ಸೋಜಾ, ಜಸಿಂತಾ ಫೆರ್ನಾಂಡಿಸ್, ಆಧ್ಯಾತ್ಮಿಕ ಸಮಿತಿಯ ಸಂಚಾಲಕಿ ಪ್ರೆಸಿಲ್ಲಾ ಫೆರ್ನಾಂಡಿಸ್, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಪ್ಯಾಟ್ಸಿ ಮೊಂತೇರೊ, ಕ್ರೈಸ್ತ ಶಿಕ್ಷಣ ಸಂಚಾಲಕಿ ಲಿಝಿ ಫೆರ್ನಾಂಡಿಸ್ ಅವರು ಶ್ರಮದಾನದಲ್ಲಿ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು