3:32 PM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಸಂತ ತೆರೆಸಾ ಚರ್ಚ್: ಬೀಳ್ಕೊಡುಗೆ ಸಮಾರಂಭ

22/03/2026, 20:23

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಡಿಯಾಕೋನ್ ಆಗಿದ್ದ ರೋವಿನ್ ಲೋಪೆಜ್ ಅವರನ್ನು ಬೀಳ್ಕೊಡಲಾಯಿತು.
ಕಳೆದ ಆರು ತಿಂಗಳುಗಳಿಂದ ಪಾಲ್ದನೆ ಚರ್ಚ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಚರ್ಚ್ ಧರ್ಮಗುರುಗಳಾದ ವಂದನೀಯ ಫಾ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರೊಂದಿಗೆ ಸಹಕರಿಸುತ್ತಿದ್ದು, ಮುಂದಿನ ತಿಂಗಳ 29 ರಂದು ಕಪುಚಿನ್ ಧರ್ಮಗುರುಗಳಾಗಿ ಗುರು ದೀಕ್ಷೆಯನ್ನು ಹೊನ್ನಾವರ ಚರ್ಚ್ ನಲ್ಲಿ ಸ್ವೀಕರಿಸಲಿದ್ದಾರೆ.
ವಿದಾಯ ಸಮಾರಂಭದಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾ . ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಮಾತನಾಡಿ ಶುಭ ಹಾರೈಸಿದರು.
ಚರ್ಚ್ ನ ಜನರಿಂದ ದೊರೆತ ಸಹಕಾರದ ಬಗ್ಗೆ ಡಿಯಾಕೋನ್ ರೋವಿನ್ ಲೋಪೆಜ್ ಅವರು ಕೃತಜ್ಞತಾ ಭಾವನೆಯೊಂದಿಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಚರ್ಚ್ ನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಸನ್ಮಾನ ಪತ್ರ ವಾಚಿಸಿದರು. ಕಾರ್ಯದರ್ಶಿ ರೋಶನ್ ಮೊಂತೇರೊ ಪುಷ್ಪಾರ್ಚನೆಗೈದರು. ಸರ್ವ ಆಯೋಗಗಳ ಸಂಚಾಲಕ ವಿಲಿಯಂ ಲೋಬೊ ಉಪಸ್ಥಿತರಿದ್ದರು.
ಮಾಜಿ ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು