10:35 AM Thursday20 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬಂದೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

26/04/2025, 18:18

ಸಾವರ್ಕರ್, ಗೋಲ್ವಾಲ್ಕರ್ ಅವರು ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು: ಸಿಎಂ

ಮೈಸೂರು(reporterkarnataka.com): ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಯುವ ಕಾಂಗ್ರೆಸ್ ಆಯೋಜಿಸಿದ್ದ “ಯುವ ಕ್ರಾಂತಿ” ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ವಿಶೇಷ ಉಪನ್ಯಾಸ ನೀಡಿದರು.
ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ ಎಂದು ಸಿಎಂ ವ್ಯಂಗ್ಯವಾಡಿದರು.‌
ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾದಿ ಹಾಕಿದವರು ನೆಹರು. ಬಹುತ್ವದ ಭಾರತದ ನೆಲದಲ್ಲಿ ಏಕತೆ ತಂದು ಸಹಿಷ್ಣುತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ ಎಂದರು.
ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತ ಸಮಾಜವನ್ನು ಜಾತಿ ಆಧಾರದಲ್ಲಿ ಬಿರುಕು ಮೂಡಿಸಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು ಎಂದರು.
ಯುವ ಕಾಂಗ್ರೆಸ್ ಅಂದರೆ ಭಾರತದ ಸಂವಿಧಾನ ಮತ್ತು ಬಹುತ್ವದ ರಕ್ಷಣೆಗೆ ನಿಂತ ಯುವ ಸೈನ್ಯ. ನಾವು ಏಕೆ ಕಾಂಗ್ರೆಸ್ ಕಟ್ಟುತ್ತಿದ್ದೇವೆ, ಆರೆಸ್ಸೆಸ್ ಮತ್ತು ಸಂಘ ಪರಿವಾರ ಹೇಗೆ ಭಾರತದ ಬಹುತ್ವ ಮತ್ತು ಸಂವಿಧಾನ ವಿರೋಧಿ ಎನ್ನುವ ಸ್ಪಷ್ಟತೆ ನಿಮಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಬಹಳ ವರ್ಷ ಕಾಂಗ್ರೆಸ್ ನಲ್ಲಿ ಉಳೀತಾರೆ ಎನ್ನುವುದು ಅನುಮಾನ ಎಂದು ಅವರು ನುಡಿದರು.
ಸ್ವಾತಂತ್ರ, ಸಮಾನತೆ, ಬ್ರಾತೃತ್ವ ಹಾಗೂ ಸಹಿಷ್ಣತೆ, ಸಹಬಾಳ್ವೆ ನಮ್ಮ ಸಂವಿಧಾನದ ಉಸಿರು. ಇದೇ ಭಾರತದ ಉಸಿರು ಕೂಡ ಆಗಿದೆ ಎಂದರು.
“ಅಧಿಕಾರ ಬಲಾಡ್ಯರ ಕೈಯಲ್ಲಿ ಇರಬಾರದು. ಜನ ಸಾಮಾನ್ಯರ ಕೈಯಲ್ಲಿ ಇರಬೇಕು” ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಬಿಜೆಪಿ ಬಲಾಡ್ಯರಿಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. ಇದು ಸಂವಿಧಾನ ವಿರೋಧಿ. ಹೀಗಾಗಿ ಬಿಜೆಪಿ ಸಂವಿಧಾನವನ್ನೇ ವಿರೋಧಿಸುತ್ತದೆ ಎಂದು ಅವರು ಹೇಳಿದರು.
ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಸ್ವಾತಂತ್ರ್ಯ ಸಾರ್ಥಕತೆ ಆಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಪಡೆದುಕೊಳ್ಳಬೇಕು. ಕಟ್ಟ ಕಡೆಯ ಮನುಷ್ಯನಿಗೆ ಶಕ್ತಿ ಕೊಡುವುದೇ ಸರ್ವೋದಯದ ಆಶಯ ಎಂದರು.
ಮೌಢ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಕೃತಕವಾಗಿ ಸೃಷ್ಟಿಸಿ ನೀರು ಗೊಬ್ಬರ ಹಾಕಿ ಗಟ್ಟಿ ಮಾಡಿಟ್ಟಿದ್ದಾರೆ. ದೇವರು ಒಬ್ಬರಿಗೊಂದು ಮತ್ತೊಬ್ಬರಿಗೊಂದು ಮಾಡುವುದಿಲ್ಲ. ದೇವರ ಹೆಸರಲ್ಲಿ ಮೌಢ್ಯಗಳನ್ನು ಬಿತ್ತುವವರ ಬಗ್ಗೆ ಎಚ್ಚರ ವಿರಲಿ. ಶರಣ ಬಸವಣ್ಣ ಹೇಳಿದ ರೀತಿಯಲ್ಲಿ ದೇವರು ಇದ್ದಾನೆ. ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು. ಮಾಡಬಾರದ ಪಾಪಗಳನ್ನೆಲ್ಲಾ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ. ಈ ಬಗ್ಗೆ ದೇಶದ ಜನರ ತಿಳಿವಳಿಕೆ ಹೆಚ್ಚಿಸುವ ಕೆಲಸ ಆಗಬೇಕಿದೆ ಎಂದರು.
ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಅಂಬೇಡ್ಕರ್ ಅವರೇ ಸ್ಪಷ್ಟವಾಗಿ ಬರೆದಿದ್ದಾರೆ.
ನಿಮಗೆ ಸ್ಪಷ್ಟತೆ ಮತ್ತು ಬದ್ಧತೆ ಇದ್ದರೆ ಯಾರು ಏನೇ ಮಾಡಿದರೂ ನೀವು ಬದಲಾಗಲ್ಲ ಎಂದರು.

ರಾಜೀವ್ ಗಾಂಧಿ ಅವರು ಕೊಟ್ಟ ಮೀಸಲಾತಿಯನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು ಬಿಜೆಪಿಯ ರಾಮಾ ಜೋಯಿಸ್. ಆದರೆ ನ್ಯಾಯಾಲಯ ರಾಜೀವ್ ಗಾಂಧಿ ಅವರು ತಂದ ತಿದ್ದುಪಡಿಯನ್ನು ಇದು ಸಂವಿಧಾನ ಬದ್ದ ಎಂದು ಎತ್ತಿ ಹಿಡಿಯಿತು. ಮೀಸಲಾತಿಯನ್ನು ವಿರೋಧಿಸಿದ್ದ ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು ಎಂದರು.
ಹೀಗಾಗಿ ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ನಿಮಗೆ ಸ್ಪಷ್ಟತೆ ಇದ್ದರೆ ಮುಂದೆ ಉತ್ತಮ‌ ನಾಯಕರಾಗಿ ಬೆಳೆಯುತ್ತೀರಿ ಎಂದು ಕರೆ ನೀಡಿದರು.
ಯುವ ಕಾಂಗ್ರೆಸ್ ಇಂದು ಇಲ್ಲಿ ಆಯೋಜಿಸಿರುವ ಇಂತಹ ಕಾರ್ಯಾಗಾರಗಳು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಡೆಯಬೇಕು ಎಂದು ಕರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು