8:05 AM Thursday13 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ

05/10/2024, 23:26

ಬಂಟ್ವಾಳ(reporterkarnataka.com): ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ.
ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್‌ಆರ್‌ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆ ನೀಡಲಾಯಿತು. ಈ ಬಸ್ ಪೊಳಲಿ ದೇಗುಲದಿಂದ ಬೆಂಜನಪದವು, ಕಲ್ಪನೆ, ಕಡೇಗೋಳಿ, ಫರಂಗಿಪೇಟೆ, ಪಡೀಲ್ ಮಾರ್ಗವಾಗಿ ಮಂಗಳೂರ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ಪಯಣಿಸಲಿದೆ.
ಇದರಿಂದಾಗಿ ಈ ಭಾಗದ ಜನರ ಸರಕಾರಿ ಬಸ್ಸಿನ ಬಹುಕಾಲದ ಕನಸು ನನಸಾಗಿದೆ. ಹಲವು ವರ್ಷದಿಂದ ಈ ರೂಟಿನಲ್ಲಿ ಮಂಗಳೂರಿನಿಂದ ಪೊಳಲಿಗೆ ಸರಕಾರಿ ಬಸ್‌ನ ವ್ಯವಸ್ಥೆ ಕಲ್ಪಿಸುವಂತೆ ಇಲ್ಲಿನ ನಾಗರಿಕರು ಕೆಎಸ್‌ಆರ್‌ಟಿಸಿ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತ್ತು. ಬ್ರಹ್ಮರಕೊಟ್ಲು ಯಕ್ಷಮಿತ್ರ ಸದಸ್ಯರು ಹಾಗೂ ಸ್ಥಳೀಯ ಮುಖಂಡರ ಮುತುವರ್ಜಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿಯೇ ಕೆಎಸ್‌ಆರ್‌ಟಿಸಿಬಸ್ ಬಸ್ ಆರಂಭಗೊಂಡಿದೆ. ನವರಾತ್ರಿಯ ಬಳಿಕವು ಈ ಬಸ್‌ನ ವ್ಯವಸ್ಥೆ ಮುಂದುವರಿಯಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು