7:18 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮಂಗಳೂರು ಪೊಲೀಸ್ ಕಮಿಷನ್ ಆದೇಶದ ಬಳಿಕವೂ ಫುಟ್ ಬೋರ್ಡ್ ನಲ್ಲಿ ಪ್ರಯಾಣ:123 ಪ್ರಕರಣ ದಾಖಲು

01/09/2023, 19:00

ಮಂಗಳೂರು(reporterkarnataka.com): ಕಡಲ ನಗರಿಯಲ್ಲಿ ನಿರ್ವಾಹಕರೊಬ್ಬರು ಸಿಟಿ ಬಸ್ಸಿನಿಂದ ರಸ್ತೆಗೆ ಬಿದ್ದು ಸಾವನ್ನಪ್ಪಿದ ಘಟನೆಯ ಬಳಿಕ ಮಂಗಳೂರು ಪೊಲೀಸ್ ಕಮಿಷನರ್ ಫುಟ್ ಬೋರ್ಡ್ ಪ್ರಯಾಣವನ್ನು ನಿಷೇಧಿಸಿ ನೀಡಿದ ಆದೇಶವನ್ನು ಉಲ್ಲಂಘಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 123 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಬಸ್ಸಿನ ಫುಟ್‌ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ
ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಇದರಂತೆ ನಗರದ ವಿವಿಧ ಕಡೆಗಳಲ್ಲಿ 123 ಪ್ರಕರಣಗಳನ್ನು ದಾಖಲಿಸಲಾಗಿದೆ.
ನಗರದ ನಂತೂರು ಬಳಿ ಸಿಟಿ ಬಸ್ಸಿನಿಂದ ಕಂಡಕ್ಟರ್ ಒಬ್ಬರು ರಸ್ತೆಗೆ ಎಸೆಯಲ್ಪಟ್ಟು ಸಾವಿಗೀಡಾದ ಬಳಿಕ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡು ಬಸ್ ಗಳಿಗೆ ಬಾಗಿಲು ಕಡ್ಡಾಯಗೊಳಿಸಿದ್ದಾರೆ. ಈ ನಡುವೆ ಕಾರ್ಯಾಚರಣೆ ಮುಂದುವರೆಸಲಾಗಿದೆ. ಫುಟ್‌ಬೋರ್ಡ್‌ನಲ್ಲಿ ನಿಂತವರ ವಿರುದ್ಧ ಕ್ರಮಕೈಗೊಂಡಿದ್ದಾರೆ. ಅಲ್ಲದೆ, ಇನ್ನು ಮುಂದಕ್ಕೆ ನಿಂತಿರುವುದು ಕಂಡುಬಂದರೆ ಬಸ್ ಮುಂದಕ್ಕೆ ಕೊಂಡೊಯ್ಯಬಾರದೆಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಬಾಗಿಲು ಹೊಂದಿರುವ ಬಸ್‌ಗಳು ಇನ್ನೂ ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು. ಹಾಗೂ ಬಾಗಿಲನ್ನು ಸಂಚಾರದ ಸಮಯದಲ್ಲಿ ಮುಚ್ಚಿರಬೇಕೆಂದು ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು