3:48 PM Thursday1 - October 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

Mangaluru | ದುಬಾರಿಯಾಗುತ್ತಿದೆ ಪೊಲೀಸ್ ಧ್ವಜ ದಿನಾಚರಣೆ: ಬ್ಯಾಡ್ಜ್ ಗೆ 500 ರೂ. ವಸೂಲಿ!!

27/03/2026, 18:18

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯದಲ್ಲಿ ಪ್ರತಿ ವರ್ಷ ಏಪ್ರಿಲ್ 2ರಂದು ಪೊಲೀಸ್ ಧ್ವಜ ದಿನಾಚರಣೆ (Police Flag Day) ಆಚರಿಸಲಾಗುತ್ತದೆ. ಆದರೆ ಈ ಬಾರಿಯ ಧ್ವಜ ದಿನಾಚರಣೆ ಸಾರ್ವಜನಿಕರ ಪಾಲಿಕೆ ದುಬಾರಿಯಾಗಿ ಪರಿಣಮಿಸಿದೆ ಎಂಬ ಸಾರ್ವತ್ರಿಕ ಅಭಿಪ್ರಾಯ ಕೇಳಿ ಬರುತ್ತಿದೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಧ್ವಜ ದಿನಾಚರಣೆ ಆಚರಿಸಲು ಸಕಲ ಸಿದ್ದತೆ ನಡೆದಿದೆ. ಈ ನಿಟ್ಟಿನಲ್ಲಿ ಪೊಲೀಸ್ ಧ್ವಜವನ್ನು(ಬ್ಯಾಡ್ಜ್) ಖಾಸಗಿ ಸರ್ವಿಸ್ ಬಸ್ ಮತ್ತು ಸಿಟಿ ಬಸ್ ಗಳಿಗೆ ಹಂಚಲಾಗುತ್ತಿದೆ. ಖಾಸಗಿ ವಾಹನಗಳಿಗೂ ನೀಡಲಾಗುತ್ತದೆ. ಹಾಗೆಂತ ಇದು ಫ್ರಿಯಲ್ಲ, ಬದಲಿಗೆ 500 ರೂ. ಕೊಡಬೇಕು. ಈ ಹಿಂದೆ 100 ರೂ.ಗೆ ಧ್ವಜ ಹಂಚಲಾಗುತ್ತಿತ್ತು. ಆದರೆ, ಈ ಬಾರಿ ಧ್ವಜದ ದರ ಗಗನಕ್ಕೇರಿದೆ ಎಂದು ಬಸ್ ಚಾಲಕರು ಹಾಗೂ ನಿರ್ವಾಹಕರು ಹಿಡಿಶಾಪ ಹಾಕುತ್ತಿದ್ದಾರೆ. ಬಸ್ ಸಿಬ್ಬಂದಿಗಳಲ್ಲಿ ಧ್ವಜ ಖರೀದಿಸುವಂತೆ ಒತ್ತಡ ಹೇರಲಾಗುತ್ತಿದೆ. ಖಾಸಗಿ ವಾಹನಗಳ ಮಾಲೀಕರಿಗೂ ಪೊಲೀಸ್ ಸಿಬ್ಬಂದಿಗಳು ದುಂಬಾಲು ಬಿದ್ದಿದ್ದಾರೆ.ಅಂಗಡಿ- ಮುಂಗಟ್ಟುಗಳಿಗೂ ಧ್ವಜ ಹಂಚಲಾಗುತ್ತಿದೆ.
1965ರ ಏಪ್ರಿಲ್ 2ರಂದು ರಾಜ್ಯದಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಜಾರಿಗೆ ಬಂದ ಸವಿ ನೆನಪಿಗಾಗಿ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಗುತ್ತಿದೆ. ಸಮಾಜದ ಶಾಂತಿ, ಸುವ್ಯವಸ್ಥೆಗಾಗಿ ಕರ್ತವ್ಯದ ಹಾದಿಯಲ್ಲಿ ಬಲಿದಾನಗೈದ ಪೊಲೀಸ್ ಅಧಿಕಾರಿಗಳನ್ನು ಗೌರವಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಅಂಗವಾಗಿ ಪೊಲೀಸ್ ಇಲಾಖೆಯು ಧ್ವಜಗಳನ್ನು ಮಾರಾಟ ಮಾಡುವ ಮೂಲಕ ನಿವೃತ್ತ ಸಿಬ್ಬಂದಿ ಮತ್ತು ಅವರ ಕುಟುಂಬಗಳ ಕಲ್ಯಾಣ ನಿಧಿಗೆ ದೇಣಿಗೆ ಸಂಗ್ರಹಿಸುತ್ತದೆ.
ಉದ್ದೇಶವೇನೋ ಬಹಳ ಒಳ್ಳೆಯದು. ಆದರೆ ಈ ದುಬಾರಿ ದುನಿಯಾದಲ್ಲಿ ಧ್ವಜದ ಹೆಸರಿನಲ್ಲೂ 500 ರೂ. ಸಂಗ್ರಹಿಸುತ್ತಿರುವುದು ಸಹ್ಯವಾಗಿಲ್ಲ ಎಂದು ಮಂಗಳೂರಿನ ಹೆಚ್ಚಿನ ಬಸ್ ಚಾಲಕರು ಹಾಗೂ ನಿರ್ವಾಹಕರು ಅಭಿಪ್ರಾಯಪಡುತ್ತಾರೆ. ಪೊಲೀಸ್ ಸಿಬ್ಬಂದಿಗಳಲ್ಲಿ ಈ ಕುರಿತು ಕೇಳಿದರೆ, ಮೇಲಿನಿಂದ ಬಂದ ಆದೇಶ. ನಾವೇನೂ ಮಾಡುವ ಹಾಗಿಲ್ಲ ಎಂದು ಅಸಹಾಯಕತೆ ಪ್ರದರ್ಶಿಸುತ್ತಾರೆ.
ಒಟ್ಟಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ ಸಾರ್ವಜನಿಕರಿಗೆ ದುಬಾರಿಯಾಗಿ ಪರಿಣಮಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು