ಇತ್ತೀಚಿನ ಸುದ್ದಿ
ಮಂಗಳೂರು ಪೊಲೀಸರ ಕಾರ್ಯಾಚರಣೆ: ತಲೆ ಮರೆಸಿಕೊಂಡು ವಿದೇಶಕ್ಕೆ ಹೋಗಿದ್ದ ಆರೋಪಿಯ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ
26/08/2023, 10:45

ಮಂಗಳೂರು(reporterkarnataka.com): ಕ್ರಿಮಿನಲ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತಲೆಮರೆಸಿಕೊಂಡು ವಿದೇಶಕ್ಕೆ ಹೋಗಿದ್ದ ಆರೋಪಿಯನ್ನು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮುಳಿಹಿತ್ಲು ಅರೇಕೆರೆ ಬೈಲ್ ನಿವಾಸಿತಾದ ಅಭಿಜಿತ್ ಅಲಿಯಾಸ್ ಅಭಿ(30)ಬಂಧಿತ ಆರೋಪಿ. ಈತನ ಮೇಲೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಕೇಸ್ ದಾಖಲಾದ ಬಳಿಕ ಆರೋಪಿಯು ದಸ್ತಗಿರಿಗೆ ಸಿಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕಾರಣ ನ್ಯಾಯಾಲಯವು LOC ಹೊರಡಿಸಿತ್ತು. ಇದೀಗ ಆರೋಪಿಯನ್ನು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳೂರು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.