1:52 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮಂಗಳೂರು ಪೊಲೀಸರ ಭಾರಿ ಕಾರ್ಯಾಚರಣೆ: ಇಬ್ಬರು ಕುಖ್ಯಾತ ಕಳ್ಳರ ಬಂಧನ; 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೈಕ್ ವಶ

26/06/2023, 16:40

ಮಂಗಳೂರು(reporterkarnataka.com): ದ.ಕ ಹಾಗೂ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ಎಗರಿಸುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಮಂಗಳೂರು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು,ಬಂಧಿತರಿಂದ 14 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.

ಕೃಷ್ಣಾಪುರ ಮೂಲದ ಹಬೀಬ್ ಹಾಸನ ಮತ್ತು ಉಳ್ಳಾಲದ ಮೊಹಮ್ಮದ್ ಫೈಸಲ್ ಎಂಬವರು ಬಂಧಿತ ಆರೋಪಿಗಳು. ಇವರಿಬ್ಬರು ಈ ಹಿಂದೆ ಮಂಗಳೂರು ಕಾರಾಗೃಹ ಹಾಗೂ ಕಾರವಾರ ಜೈಲಿನಲ್ಲಿದ್ದು ಸಜೆ ಅನುಭವಿಸಿದ್ದರು. ಇಬ್ಬರ ಬಂಧನದ ನಂತರ 12 ಪ್ರಕರಣಗಳ ಪೈಕಿ 8 ಚೈನ್ ಸ್ನ್ಯಾಚಿಂಗ್ ಮತ್ತು 4 ಬೈಕ್ ಕಳ್ಳತನ ಪ್ರಕರಣಗಳನ್ನು ಭೇದಿಸಲಾಗಿದೆ. ಬಂಧಿತರಿಂದ 14 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.
ಹಬೀಬ್ ಹಸನ್ ವಿರುದ್ಧ 35 ಪ್ರಕರಣಗಳು ದಾಖಲಾಗಿದ್ದು, ಮೊಹಮ್ಮದ್ ಫೈಸಲ್ ವಿರುದ್ಧ ಉಡುಪಿ, ದಕ್ಷಿಣ ಕನ್ನಡ ಮತ್ತು ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ 15 ಪ್ರಕರಣಗಳಿವೆ. ಮೊಹಮ್ಮದ್ ಫೈಸಲ್ ಎಂಬಾತ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಅಪರಾಧಿಯಾಗಿದ್ದ.

ಖಾಕಿ ಬಲೆಗೆ ಬಿದ್ದದ್ದು ಹೇಗೆ?:
ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ತಡಂಬೈಲ್‌ ಎಂಬಲ್ಲಿ ಪುಷ್ಪಾವತಿ ಎಂಬವರು ಜೂ.2 ರಂದು ಮುಂಜಾನೆ ತಮ್ಮ ಮನೆಯ ಕಂಪೌಂಡ್‌ ಒಳಭಾಗದಲ್ಲಿದ್ದ ಬಾವಿಯಿಂದ ನೀರು ಸೇದುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಅಂದಾಜು 1.25 ಲಕ್ಷ ರೂ. ಬೆಲೆಯ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದರು. ಈ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರಿಗೆ ಕಳ್ಳರು ಕದ್ದ ಚಿನ್ನಾಭರಣವನ್ನು ಮಂಗಳೂರು ನಗರ ಮಾರಾಟಕ್ಕೆ ಯತ್ನಿಸಿ ವಿಫಲರಾಗಿ, ಸುರತ್ಕಲ್ ನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿರುವುದು ಪೊಲೀಸರಿಗೆ ತಿಳಿದು ಬಂದಿತ್ತು. ಹೀಗಾಗಿ ಮಾಧವ ನಗರ ಕೊಡಿಪ್ಪಾಡಿ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ, ದಿಚಕ್ರವಾಹನವೊಂದನ್ನು ನಿಲ್ಲಿಸಲು ಸೂಚಿಸಿದಾಗ ಸವಾರರಿಬ್ಬರು ವಾಹನದಿಂದ ಇಳಿದು ಓಡಿದ್ದರು. ಇವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಹಲವು ಪ್ರಕರಣಗಳ ಬಯಲಿಗೆ ಬಂದಿತ್ತು. ವಯಸ್ಸಾದ ಮಹಿಳೆಯರನ್ನು ಗುರಿಯಾಗಿಸುತ್ತಿದ್ದ ಆರೋಪಿಸಿಗಳು ಕದ್ದ ದ್ವಿಚಕ್ರ ವಾಹನಗಳನ್ನು ಚೈನ್ ಸ್ನ್ಯಾಚಿಂಗ್ ಗೆ ಬಳಸುತ್ತಿದ್ದರು. ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ 8000 ರೂಪಾಯಿ ಬಹುಮಾನ ಘೋಷಿಸಿದ್ದಾರೆ.ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು